ಕರ್ಣಾಟಕ ಬ್ಯಾಂಕ್ ಸಿಇಓ, ಇಡಿ ರಾಜೀನಾಮೆ ಆಂಗೀಕಾರ

ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆಯನ್ನು ಬ್ಯಾಂಕಿನ ಆಡಳಿತ ಮಂಡಳಿ ಭಾನುವಾರ ಆಂಗೀಕರಿಸಿದೆ. ಇದು ಜುಲೈ 15ರಿಂದ ಅನ್ವಯವಾಗಲಿದೆ. ಶರ್ಮಾ ಅವರು ಮುಂಬೈಗೆ ಮರಳುವುದೂ ಸೇರಿದಂತೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ ಎಂದು ಬ್ಯಾಂಕಿನ ಪ್ರಕಟಣೆ ಹೇಳಿದೆ.

ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ ರಾವ್ ಕೂಡಾ ಮಂಗಳೂರಿಗೆ ಸ್ಥಳಾಂತರಗೊಳ್ಳಲು ಅಸಾಧ್ಯ ಎಂಬ ಕಾರಣ ನೀಡಿ ಮತ್ತು ಇತರ ವೈಯಕ್ತಿಕ ಸಮಸ್ಯೆಗಳ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನೂ ಬ್ಯಾಂಕ್ ಆಡಳಿತ ಮಂಡಳಿ ಆಂಗೀಕರಿಸಿದ್ದು, ಜುಲೈ 31ರಿಂದ ಅನ್ವಯವಾಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು