Header Ads Widget

21ಕ್ಕೆ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ

ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಹನೂರು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ ಸಹಯೋಗ ನೀಡಿವೆ.

21ರಂದು ಬೆಳಿಗ್ಗೆ 11.30ಕ್ಕೆ ಬೆಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಂಎಸ್‌ಐಎಲ್ ಅಧ್ಯಕ್ಷ ಪುಟ್ಟರಂಗಶೆಟ್ಟಿ, ಹನೂರು ಶಾಸಕ ಎಂ.ಆರ್.ಮಂಜುನಾಥ್, ಕೊಳ್ಳೆಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಸಂಸದ ಸುನೀಲ್ ಬೋಸ್ ಭಾಗವಹಿಸಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾಧಿಕಾರಿ ಶಿಲ್ಪನಾಗ್, ಎಸ್ಪಿ ಬಿ.ಟಿ.ಕವಿತಾ, ಜಿಪಂ ಸಿಇಒ ಮೋನಾ ರೋತ್, ಮಲೆಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು, ಮಾಜಿ ಶಾಸಕ ನರೇಂದ್ರ, ಬಿಜೆಪಿ ಮುಖಂಡರಾದ ಜನಧ್ವನಿ ವೆಂಕಟೇಶ್, ನಿಶಾಂತ್, ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜ ಕಪ್ಪಸೋಗೆ ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪತ್ರಕರ್ತರು ಮತ್ತು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಮಕ್ಕಳನ್ನು ಸನ್ಮಾನಿಸಲಾಗುವುದು ಎಂದು ಕೆಯುಡಬ್ಲೂೃಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು