BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ
[ಹೋಮ್] ತಿಂಗಳ ಪಾಪ್ಯುಲರ್ ಸುದ್ದಿಗಳು

Krishna Mata Astami 2026

Krishna Mata Astami 2026
ಸುದ್ದಿ

ಪತ್ರಕರ್ತ ಪ್ರಕಾಶ್ ಜಿ ಕಾದಂಬರಿ ನನ್ಸಿರಿ ಬಿಡುಗಡೆ

ಪತ್ರಕರ್ತ ವೃತ್ತಿಯನ್ನಾಗಿಸಿಕೊಂಡವರಲ್ಲಿ ಬಹಳಷ್ಟು ಜನರು ಪ್ರವೃತ್ತಿಯಾಗಿ ಸಾಹಿತ್ಯ ರಚನೆಯಲ್ಲಿಯೂ ತೊಡಗಿಸಿಕೊಂಡಿರುವುದು ಮಹತ್ವದ ಬೆಳವಣಿಗೆ ಎಂದು ಸಾಹಿತಿ ಜೋಗಿ ಅಭಿಪ್ರಾಯಪಟ್ಟರು.

ನಯನ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪ್ರಕಾಶ್ ಜಿ. ಅವರು ರಚಿಸಿದ ನನ್ಸಿರಿ ಕಾದಂಬರಿ ಬಿಡುಗಡೆಗೊಳಿಸಿ ಅವರು ಮಾತನಾಡಿದ ಅವರು, ಸಾಹಿತ್ಯದ ಬರವಣಿಗೆಯಲ್ಲಿ ತೊಡಗಿಸಿಕೊಂಡವರಲ್ಲಿ ಶಿಕ್ಷಕರು ಮತ್ತು ಪತ್ರಕರ್ತರ ಸಂಖ್ಯೆ ಹೆಚ್ಚಿದೆ ಎಂದರು.

ಬೂಕರ್ ಪ್ರಶಸ್ತಿಗೆ ಪಾತ್ರರಾದ ಬಾನುಮುಷ್ತಾಕ್, ಅವರ ಕೃತಿಯನ್ನು ಇಂಗ್ಲೀಷ್‌ಗೆ ಅನುವಾದಿಸಿದ ದೀಪಾಭಾಸ್ತಿ ಅವರು ಇಬ್ಬರೂ ಪತ್ರಕರ್ತರು ಎನ್ನುವುದನ್ನು ಸಾಹಿತ್ಯಲೋಕ ಗಮನಿಸುತ್ತಿದೆ ಎಂದರು.

ಸಾಹಿತ್ಯಕ್ಕೆ ಭಿನ್ನ ಬರಹಗಳು ಹೆಚ್ಚೆಚ್ಚು ಬರಬೇಕೆಂದರೆ ಉತ್ತಮ ಭಾಷಾ ಸಂವಹನ ಕೌಶಲ್ಯ ಹೊಂದಿರುವ ವರದಿಗಾರರು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು. ಧ್ಯಾನಸ್ಥ ಸ್ಥಿತಿಯಲ್ಲಿದ್ದರೆ ಮಾತ್ರವೇ ಬರವಣಿಗೆ ಮಾಡಲು ಸಾಧ್ಯ. ನಿತ್ಯವೂ ಓದು ಮತ್ತು ಬರೆಯುವ ಹವ್ಯಾಸವನ್ನು ತಪ್ಪದೇ ರೂಡಿಸಿಕೊಳ್ಳಬೇಕು ಎಂದು ಹೇಳಿದರು.

ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಮಾತನಾಡಿ, ತಾವು ನೋಡಿದ ಸಂಗತಿಗಳನ್ನು, ಸಮಾಜದಲ್ಲಿ ಆಗುತ್ತಿರುವ ಬದಲಾವಣೆ, ತಲ್ಲಣಗಳನ್ನು ನನ್ಸಿರಿ ಕಾದಂಬರಿ ರೂಪಕ್ಕೆ ತರುವಲ್ಲಿ ಪ್ರಕಾಶ್ ಉತ್ತಮ ಪ್ರಯತ್ನ ಮಾಡಿದ್ದಾರೆ ಎಂದರು.

ಕರ್ನಾಟಕ ಕಾರ್ಯನಿರ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಕ್ರೀಯಾಶೀಲ ವರದಿಗಾರರಾಗಿರುವ ಪ್ರಕಾಶ್, ಬರವಣಿಗೆಯ ಮೂಲಕ ಸಾಹಿತ್ಯ ಲೋಕಕ್ಕೂ ತೆರೆದುಕೊಂಡಿದ್ದಾರೆ. ಅವರಿಂದ ಇನ್ನಷ್ಟು ಉತ್ತಮ ಕೃತಿಗಳು ಬರಲಿ ಎಂದು ಆಶಿಸಿದರು. ಜನಮಿತ್ರ ಪತ್ರಿಕೆ ಸಂಪಾದಕ ಮತ್ತು ಕೆಯುಡಬ್ಲೂೃಕೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ. ಮದನಗೌಡ, ರವಿ ನಾಕಲಗೋಡು ಅವರು ಪ್ರಕಾಶ್ ಪ್ರಯತ್ನಕ್ಕೆ ಶುಭ ಕೋರಿದರು.

ಪತ್ರಕರ್ತೆ ವಿದ್ಯಾರಶ್ಮಿ ಪೆಲತ್ತಡ್ಕ ಅವರು ನನ್ಸಿರಿ ಕೃತಿಯನ್ನು ಪರಿಚಯಿಸಿದರು. ಕೃತಿ ಕತೃ ಪ್ರಕಾಶ್ ಮಾತನಾಡಿ, ಇದು ತಮ್ಮ ಚೊಚ್ಚಲ ಪ್ರಯತ್ನವಾಗಿದ್ದು, ಈ ನಿಟ್ಟಿನಲ್ಲಿ ಸಹಕಾರ ನೀಡಿ, ಬೆನ್ನು ತಟ್ಟಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ಹಿರಿಯ ಪತ್ರಕರ್ತರಾದ ತಿಮ್ಮಪ್ಪಭಟ್ ಸೇರಿದಂತೆ ಹಲವು ಹಿರಿಯ ಪತ್ರಕರ್ತರು ಶುಭ ಹಾರೈಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!