ದಿನಾಂಕ 21-06-2025ರಂದು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಐಟಿಡಿಪಿ ಹಾಗೂ ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ "11ನೇ ಅಂತರಾಷ್ಟ್ರೀಯ ಯೋಗದಿನಾಚರಣೆ" ಕಾರ್ಯಕ್ರಮ ಬೆಳಿಗ್ಗೆ 7.00ಗಂಟೆಯಿಂದ 7.45ರವರೆಗೆ ಯೋಗಾಭ್ಯಾಸ, ನಂತರ ಸಭಾ ಕಾರ್ಯಕ್ರಮ ನಡೆಯಿತು.11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಪಾಲ್ಗೊಂಡಿದ್ದರು. ಶ್ರೀ ಯಶ್ ಪಾಲ್ ಸುವರ್ಣ ಮಾನ್ಯ ಶಾಸಕರು ಉಡುಪಿ ವಿಧಾನಸಭಾ ಕ್ಷೇತ್ರ ಹಾಗೂ ಗುರ್ಮೆ ಸುರೇಶ್ ಶೆಟ್ಟಿ ಶಾಸಕರು ವಿಧಾನಸಭಾ ಕ್ಷೇತ್ರ ಕಾಪು, ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ,ಶ್ರೀಮತಿ ಸ್ವರೂಪ ಟಿ ಕೆ ಮಾನ್ಯ ಜಿಲ್ಲಾಧಿಕಾರಿ ಉಡುಪಿ, ಡಾ | ಸತೀಶ್ ಆಚಾರ್ಯ
ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಅಂತರಾಷ್ಟ್ರೀಯ ಯೋಗ ಪಟು ಶಿವಾನಿ ಶೆಟ್ಟಿ ಉಡುಪಿ ಇವರಿಂದ ಯೋಗಾಸನ ಪ್ರದರ್ಶನ ನಡೆಯಿತು.ಯೋಗ ತರಬೇತುದಾರರಾದ ಶ್ರೀಮತಿ ಶೋಭಾ ಶೆಟ್ಟಿ ಹಾಗೂ ಚೆನ್ನಮ್ಮ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.
0 ಕಾಮೆಂಟ್‌ಗಳು