ರಕ್ತದಾನ ಮಹಾದಾನವಾಗಿದ್ದು, ಆಪತ್ತಿನಲ್ಲಿರುವ ಮತ್ತೊಬ್ಬರ ಜೀವ ಉಳಿಸಲು ಸಹಾಯವಾಗುತ್ತದೆ. ಇಂತಹ ಕಾರ್ಯಕ್ಕೆ ಹೆಚ್ಚು ಜನರು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಕರೆ ನೀಡಿದರು.
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಧಿಕಾರಿ ಕಚೇರಿ, ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ, ಕೆಎಂಸಿ ರಕ್ತನಿಧಿ ಕೇಂದ್ರ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ಬಾರಿ ರಕ್ತದಾನ ಮಾಡುವುದರಿಂದ ಮೂರು ಜನರ ಜೀವಗಳನ್ನು ಉಳಿಸಲು ಸಾಧ್ಯ. ವೈದ್ಯಕೀಯ ಪದ್ಧತಿಯಲ್ಲಿ ಒಂದು ರಕ್ತದಾನವನ್ನು ವಿಭಿನ್ನ ಘಟಕಗಳಾಗಿ ಬೇರ್ಪಡಿಸಬಹುದು. ಪ್ರತಿಯೊಂದು ವಿಶಿಷ್ಟ ಉದ್ದೇಶವನ್ನು ಪೂರೈಸುತ್ತದೆ ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ವಿಶ್ವದಲ್ಲಿ ಪ್ರತಿ 2 ಸೆಕೆಂಡಿಗೆ ಒಬ್ಬರಿಗೆ ರಕ್ತದ ಅವಶ್ಯಕತೆ ಇರುತ್ತದೆ. ರಕ್ತದ ಅವಶ್ಯಕತೆಯನ್ನು ಪೂರೈಸಲು ರಕ್ತದಾನ ಶಿಬಿರಗಳು ಹೆಚ್ಚೆಚ್ಚು ಆಗಬೇಕು ಎಂದರು. ಜಿಲ್ಲಾ ಸರ್ಜನ್ ಡಾ| ಅಶೋಕ್ ಅವರು ರಕ್ತದಾನದ ಮಹತ್ವ ತಿಳಿಸಿದರು.
ಕೆಎಂಸಿರಕ್ತನಿಧಿಕೇಂದ್ರದವೈದ್ಯಾಧಿಕಾರಿ ಡಾ| ಶಮಿ ಶಾಸ್ತ್ರೀ ಯಾರೆಲ್ಲ ರಕ್ತದಾನ ಮಾಡಬಹುದು ಎಂಬ ಬಗ್ಗೆ ಮಾಹಿತಿ ನೀಡಿದರು. ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಪ್ರಾಸ್ತಾವಿಕ ಮಾತನಾಡಿದರು.
ಹೆಚ್ಚು ಬಾರಿ ರಕ್ತದಾನ ಮಾಡಿದ ಮೀನುಗಾರಿಕೆ ಸಹಾಯಕ ನಿರ್ದೇಶಕ ದಿವಾಕರ, ಯುವ ಸಬಲೀಕರಣ ಇಲಾಖೆಯ ಮಂಜುನಾಥ್, ಕಂದಾಯ ಇಲಾಖೆಯ ಯತೀಶ್ ಕಿದಿಯೂರು, ಸ್ವಾತಿ, ಲಾವಣ್ಯಾ, ಲತಾ ಅವರನ್ನು ಸಮ್ಮಾನಿಸಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು. 161 ಯೂನಿಟ್‌ನಷ್ಟು ರಕ್ತ ಸಂಗ್ರಹಿಸಲಾಯಿತು.
0 ಕಾಮೆಂಟ್‌ಗಳು