Header Ads Widget

ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಕೆ.ವಿ.ಪ್ರಭಾಕರ್ ಅವರಿಗೆ ಆಹ್ವಾನ

ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ಕ್ಕೆ ನಡೆಯಲಿರುವ, ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರನ್ನು ವಿಧಾನ ಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಆಹ್ವಾನ ನೀಡಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಬಿ.ದಿನೇಶ್ ಗೌಡಗೆರೆ, ಕನಕಪುರ ತಾಲ್ಲೂಕು ಘಟಕದ ಅಧ್ಯಕ್ಷ ಗಿರೀಶ್, ಪದಾಧಿಕಾರಿಗಳಾದ ವೆಂಕಟೇಶ, ಎ ಬಿ.ಕುಮಾರ್, ಕಾ.ಪ್ರಕಾಶ್, ಹಿರಿಯೂರು ಟಿ.ಪ್ರಸನ್ನ ಇದ್ದರು.