BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಂಘ ಸಂಸ್ಥೆ

ಯುವ ವಿಚಾರ ವೇದಿಕೆ(ರಿ.) ಕೊಳಲಗಿರಿ, ಉಪ್ಪೂರು- ರಜತ ಸಂಭ್ರಮ

ಯುವ ವಿಚಾರ ವೇದಿಕೆಯ ರಜತ ಸಂಭ್ರಮದ ಒಂದು ಅರ್ಥಪೂರ್ಣ ಕಾರ್ಯಕ್ರಮ. ಭೂಮಿಯ ಅಂತರ್ಜಲ ಮರುಪೂರಣ, ಪರಿಸರ ಸ್ನೇಹಿ ಸರಳ ತಂತ್ರಜ್ಞಾನದ ವಿಶಿಷ್ಟ ಯೋಜನೆಯಾದ "ಮಳೆ ನೀರು ಕೊಯ್ಲು" ಈ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ವೇದಿಕೆಯ ವಠಾರದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅರ್ಥಪೂರ್ಣ ಯೋಜನೆ ಯಶಸ್ಸಾಗಲಿ ಗ್ರಾಮದ ಜನತೆಗೆ ಮಾದರಿಯಾಗಲಿ ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸತೀಶ್ ಪೂಜಾರಿ ತಿಳಿಸಿದರು. ಒಂದು ಒಳ್ಳೆಯ ಯೋಜನೆ ಸರ್ವರಿಗೂ ಮಾದರಿ ಹಾಗೂ ನೀರಿನ ಅಭಾವದ ಪರಿಸ್ಥಿತಿಯಲ್ಲಿ ಜನರು ಇದನ್ನು ಮನೆ ಮನೆಗಳಲ್ಲಿ ಸ್ಥಾಪಿಸಿ ಅಂತರ್ಜಲ ಹೆಚ್ಚಿಸಿಕೊಳ್ಳಿ ಎಂದು ಉಪಸ್ಥಿತರಿದ್ದ ಅತಿಥಿಗಳಾದ ಗ್ರಾಮ ಪಂಚಾಯತ್ ಸದಸ್ಯರು ಶ್ರೀ ಅಶ್ವಿನ್ ರೊಚ್, ಉಪ್ಪೂರು ವ್ಯ. ಸೆ. ಸ. ಸಂಘದ ನಿರ್ದೇಶಕರಾದ ಶ್ರೀ ರಮೇಶ್ ಕರ್ಕೇರ, ಉಪ್ಪೂರು ಸರಕಾರಿ ಪ್ರೌಢ ಶಾಲೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರತ್ನಾಕರ ಮೊಗವೀರ ಅಭಿಪ್ರಾಯ ಪಟ್ಟರು. ಮಾದರಿ ಕಾರ್ಯಕ್ರಮದಲ್ಲಿ ವೇದಿಕೆ ವಠಾರದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಥಿತಿ ಗಣ್ಯರಿಗೆ ರಾಮ್ ಫಲ ಗಿಡವನ್ನು ಸ್ಮರಣಿಕೆಯಾಗಿ ನೀಡಲಾಯಿತು.

ವೇದಿಕೆಯಲ್ಲಿ ಉಪಸ್ಥಿತರಿದ್ದ ವೇದಿಕೆಯ ಪ್ರದಾನ ಕಾರ್ಯದರ್ಶಿ ಸದಾಶಿವ ಕುಮಾರ್ ಸರ್ವರನ್ನೂ ಸ್ವಾಗತಿಸಿದರು. ಅಧ್ಯಕ್ಷರಾದ ಸಂದೀಪ್ ಶೆಟ್ಟಿ ವಂದನಾರ್ಪಣೆ ಮಾಡಿದರು. ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!