ಖಾಸಗಿ ಬಸ್ ನ ಚಕ್ರದಡಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಣಿಪಾಲ ಈಶ್ವರನಗರದ ಎಂಐಟಿ ಕಾಲೇಜು ಮುಂಭಾಗ ಬುಧವಾರ (ಜು.2) ಸಂಜೆ ಸಂಭವಿಸಿದೆ.
ಬಸ್ಸು ಉಡುಪಿಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದ್ದು, ಅಪಘಾತದಲ್ಲಿ ಮಹಿಳೆಯ ದೇಹ ಛಿದ್ರ ಛಿದ್ರಗೊಂಡಿದೆ. ಮೃತ ಮಹಿಳೆಯನ್ನು ವಿನೋದ ಸಿಸ್ಟರ್ (65) ಎಂದು ಗುರುತಿಸಲಾಗಿದೆ.
ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
0 ಕಾಮೆಂಟ್‌ಗಳು