ಶಿಕ್ಷಕರು ಮತ್ತು ವೈದ್ಯರು ಸಂಬಳ ಪಡೆದರೂ ಸೇವಾ ಮನೋಭಾವ ದಿಂದ ಕಾರ್ಯನಿರ್ವ ಹಿಸುತ್ತಿದ್ದಾರೆ. ಸಮಾಜದ ಉನ್ನತಿಯಲ್ಲಿ ಈ ಎರಡೂ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ್ ಮಾತನಾಡಿ, ಪ್ರಪಂಚದ ಅತ್ಯಂತ ಕ್ಲಿಷ್ಟ ಯಂತ್ರ ವೆಂದರೆ ಮಾನವ ಶರೀರ. ಇದನ್ನು ಸುಸ್ಥಿತಿಯಲ್ಲಿಡಬೇಕಾದರೆ ಅಪಾರ ಜ್ಞಾನ ಮತ್ತು ಪರಿಣತಿ ಬೇಕು. ವೈದ್ಯ ವೃತ್ತಿಯನ್ನು ಸೇವಾ ಮನೋಭಾವದಿಂದ ಮಾಡಿದರೆ ಸಮಾಜಕ್ಕೆ ಬಹಳಷ್ಟು ಉಪಯೋಗವಾಗಲಿದೆ ಎಂದರು.
ಆದರ್ಶ ಆಸ್ಪತ್ರೆಯ ವೈದ್ಯಕಿಯ ನಿರ್ದೇಶಕ ಡಾ. ಜಿ. ಎಸ್. ಚಂದ್ರಶೇಖರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಆದರ್ಶ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾ ಚಂದ್ರಶೇಖರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹಿರಿಯ ವೈದ್ಯರಾದ ಪ್ರೊ. ಎನ್.ಆರ್. ರಾವ್, ಡಾ. ನಾಗರತ್ನಾ ಶಾಸ್ತ್ರಿ, ಡಾ. ರಾಮರಾವ್, ಡಾ. ವಾಸುದೇವ ಉಪಾಧ್ಯಾಯ, ಡಾ. ಪ್ರಶಾಂತ್ ಭಟ್, ಡಾ. ಶಶಿಕಿರಣ್ ಆಚಾರ್, ಡಾ. ಭವಾನಿ ಶಂಕರ್ ಅವರನ್ನು ಸನ್ಮಾನಿಸಲಾಯಿತು. ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.

0 ಕಾಮೆಂಟ್‌ಗಳು