ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2024 - 25 ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಸಂಸ್ಕೃತದಲ್ಲಿ 125 ಅಂಕ ಪಡೆದ 6 ಪ್ರತಿಭಾವಂತ ವಿದ್ಯಾರ್ಥಿಗಳಾದ ಪೂರ್ವಿ ಎಂ ರಾವ್, ಸುರಭಿ ಹೆಬ್ಬಾರ್, ಭಾರ್ಗವ್ ಅಡಿಗ, ವನುಷಾ ಪೂಜಾರಿ, ಪೃಥ್ವಿ ಎಂ ಆಚಾರ್ಯ, ಸ್ತುತಿ ಕುಲಾಲ್ ಇವರನ್ನು ಉಡುಪಿ ಪರ್ಯಾಯ ಪುತ್ತಿಗೆ ಮಠ ಮತ್ತು ಉಡುಪಿ ಜಿಲ್ಲಾ ಸಂಸ್ಕೃತ ಅಧ್ಯಾಪಕರ ಸಂಘದ ಸಹಯೋಗದಲ್ಲಿ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಶಾಲು, ಪ್ರಮಾಣ ಪತ್ರ, ದೀಪ, ಸ್ಮರಣಿಕೆ ನೀಡಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ವಿದ್ಯಾರ್ಥಿಗಳನ್ನು ಗೌರವಿಸಿದರು. ಅಮೃತ ಭಾರತಿ ವಿದ್ಯಾಲಯದ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ, ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಹಾಗೂ ಪೋಷಕರು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು