BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಅಪರಾಧ

ಹೆಂಡತಿಗೆ ಬೇರೆಯವರ ಜೊತೆ ಮಲಗುವಂತೆ ಪೀಡಿಸಿ ಹಿಂಸಿಸುತ್ತಿದ್ದ ಗಂಡ!

ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! ಇಂಥದ್ದೊಂದು ವಿಲಕ್ಷಣ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜಕಾರಣಿಗಳ ಜತೆ ಹಾಗೂ ಸಹಚಚರ ಒಟ್ಟಿಗೆ ಮಲಗುವಂತೆ ಒತ್ತಾಯಿಸುತ್ತಿದ್ದುದಲ್ಲದೆ, 6 ಬಾರಿ ತಲಾಖ್ ನೀಡಿದ ಮತ್ತು ಅಬಾರ್ಷನ್ ಮಾಡಿಸಿದ ಆರೋಪದಲ್ಲಿ ಪತಿಯ ವಿರುದ್ಧವೇ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಜತೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಲ್ಲಿ ಅತ್ತೆ-ಮಾವನ ವಿರುದ್ಧವೂ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಸದ್ಯ ಬನಶಂಕರಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಸಂತ್ರಸ್ತೆಯು 25-6-2021 ರಂದು ಆರೋಪಿ ಯೂನಸ್ ಪಾಷಾನನ್ನು ವಿವಾಹವಾಗಿದ್ದರು. ಇದಾದ ಸುಮಾರು 4 ತಿಂಗಳ ನಂತರ ಆರೋಪಿಗಳಾದ ಯೂನಸ್ ಪಾಷಾ, ಆತನ ತಂದೆ ಚಿಂದ್ ಪಾಷಾ, ತಾಯಿ ಪಹೀನ್ ತಾಜ್ ಸೇರಿಕೊಂಡು ಸಂತ್ರಸ್ತೆಗೆ ಹಿಂಸೆ ನೀಡಲು ಆರಂಭಿಸಿದ್ದಾರೆ. ಈ ಮಧ್ಯೆ, ಸಂತ್ರಸ್ತೆಯು ಗರ್ಭವತಿಯಾಗಿದ್ದು, ಯೂನಸ್ ಪಾಷಾ ಆಕೆಯ ಹೊಟ್ಟೆಯ ಮೇಲೆ ಒದ್ದು ಹಲ್ಲೆ ಮಾಡಿದ್ದ. 17-12-2021 ರಂದು ಸಂತ್ರಸ್ತೆಯನ್ನು ಹೆದರಿಸಿ ಮತ್ತು ಒತ್ತಾಯಪಡಿಸಿ ಗರ್ಭಪಾತ ಮಾಡಿಸಿದ್ದಾನೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.


ಪತ್ನಿಯ ತಲೆಗೆ ಗನ್ ಇಟ್ಟು ಹೆದರಿಸುತ್ತಿದ್ದ ಆರೋಪಿ:

ನಡವಳಿಕೆಗಳನ್ನು ಪ್ರಶ್ನಿಸಿದರೆ ಯೂನಸ್ ಪಾಷಾ ಆಯುಧಗಳನ್ನು ತೋರಿಸಿ ಬೆದರಿಕೆ ಹಾಕುತ್ತಿದ್ದ. ಪತ್ನಿಯ ತಲೆಗೆ ಗನ್ ಇಟ್ಟು ಹೆದರಿಸುತ್ತಿದ್ದ. ಅಷ್ಟೇ ಅಲ್ಲದೆ, ಸಂತ್ರಸ್ತೆಯ ತಂದೆ ಮತ್ತು ಕುಟುಂಬದವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಾ ಬರುತ್ತಿದ್ದ. 2023 ರಲ್ಲಿ ಸಂತ್ರಸ್ತೆ ಮೇಲೆ ಗಂಭೀರ ಹಲ್ಲೆ ಮಾಡಿದ್ದ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.

ರಾಜಕಾರಣಿಗಳು, ಸ್ಥಳೀಯ ರೌಡಿಗಳ ನಂಟು: ಪತ್ನಿಯ ಮಾರಾಟಕ್ಕೆ ಮುಂದಾಗಿದ್ದ ಪಾಷಾ!

ಯೂನಸ್ ಪಾಷಾಗೆ ರಾಜಕಾರಣಿಗಳು, ಸ್ಥಳೀಯ ರೌಡಿಗಳ ನಂಟು ಇದೆ. ಆರೋಪಿಯು ಸಂತ್ರಸ್ತೆಯನ್ನು ಆತನ ರಾಜಕಾರಣಿ ಸ್ನೇಹಿತನಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಕೆಲವು ತಿಂಗಳ ಹಿಂದೆ ತಿಳಿದು ಬಂದಿದೆ. ಇದರಿಂದ ಭಯಗೊಂಡ ಸಂತ್ರಸ್ತೆಯು ಕಳೆದ ಎರಡು ತಿಂಗಳುಗಳಿಂದ ಗಂಡನ ಮನೆ ಬಿಟ್ಟು ಬಂದು ತಾಯಿ ಮನೆಯಲ್ಲಿ ವಾಸವಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.

2025 ರ ಜೂನ್ 4 ರಂದು ಸಂತ್ರಸ್ತೆಯು ಬಟ್ಟೆಗಳನ್ನು ವಾಪಸ್ ತರಲು ಪತಿಯ ಮನೆಗೆ ಹೋಗಿದ್ದಾಗ ಪಾಷಾ ಕೊಲೆ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತೆಗೆ ಮಾತ್ರವಲ್ಲದೆ ಆಕೆಯ ತಾಯಿಗೂ ಕೊಲೆ ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ಸಂತ್ರಸ್ತೆ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಕೋರಿ ದೂರು ನೀಡಿದ್ದಾರೆ ಎಂದು ಬನಶಂಕರಿ ಠಾಣೆಯಲ್ಲಿ ದಾಖಲಾದ ಎಫ್ಐಆರ್ನಲ್ಲಿ ಹೇಳಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!