ಕಡಿಯಾಳಿ ಮಹಿಷಮರ್ಧಿನಿ ದೇವಾಸ್ಥನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯುಲು ನಡೆಸಿದ ವಿಫಲ ಯತ್ನವು ಶುಕ್ರವಾರ ತಡರಾತ್ರಿ 3 ಗಂಟೆಗೆ ನಡೆದಿದೆ.
ಕಳ್ಳರ ಕೃತ್ಯ ಗಮನಿಸಿದ ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ.
ತಕ್ಷಣ ಕಾವಲುಗಾರ ಸ್ಥಳೀಯ ಭಕ್ತರಿಗೆ ತಿಳಿಸಿದ್ದು, ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಒಟ್ಟಾಗಿದ್ದಾರೆ.
ಸಿಸಿ ಟಿವಿ ಪರಿಶೀಲಿಸಿದಾಗ ಇಬ್ಬರು ಕಳ್ಳರು ಬಂದಿರುವುದು, ನಂತರ ಓಡಿ ಹೋದ ದೃಶ್ಯ ಕಂಡುಬಂದಿದೆ. ಸ್ಥಳೀಯರು ಹುಡುಕಾಟ ನಡೆಸಿ ಕಡಿಯಾಳಿ ಪೆಟ್ರೋಲ್ ಬಂಕ್ ಬಳಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಕಳ್ಳರು ಓಡುತ್ತ ಸಾಗುವಾಗ ಒರ್ವ ಕಳ್ಳನಿಗೆ ಮೂರ್ಛ ಬಂದು ಧರೆಗುಳಿದಿದ್ದಾನೆ. ಮೂರ್ಛಹೋಗಿರುವ ಕಳ್ಳನ ಉಪಚರಿಸುತ್ತಿದ್ದ ಮತ್ತೊಬ್ಬ ಕಳ್ಳನು, ಓಡಲು ಯತ್ನಿಸಿದರೂ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮೂರ್ಛ ವ್ಯಾಧಿ ಉಲ್ಬಣಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಳ್ಳನಿಗೆ, ಸ್ಥಳೀಯರು ಕಳ್ಳತನಕ್ಕೆ ತಂದಿರುವ ಕಬ್ಬಿಣದ ಸಲಕರಣೆಗಳನ್ನು ಕೈಗೆ ನೀಡಿ ಕಳ್ಳನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಕರೆಯ ಮೆರೆಗೆ ಸ್ಥಳಕ್ಕೆ ಬಂದಿರುವ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸ್ಥಳೀಯರ ಸಹಕಾರದಿಂದ ಮೂರ್ಛಹೋಗಿರುವ ಕಳ್ಳನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.
ಮತ್ತೊಬ್ಬ ಕಳ್ಳನನ್ನು ಸ್ಥಳೀಯರು ಪೋಲಿಸರಿಗೆ ಒಪ್ಪಿಸಿದ್ದಾರೆ. ಕಳ್ಳರು ಕೇರಳ ಮೂಲದವರೆಂದು ತಿಳಿದುಬಂದಿದೆ. ಹೆಚ್ಚಿನ ವಿವರಗಳು ಮತ್ತಷ್ಟೇ ತಿಳಿದುಬರ ಬೇಕಾಗಿದೆ.
ದುಷ್ಕೃತ್ಯ ಎಸಗಲು ಬಂದಿರುವ ಕಳ್ಳನಿಗೆ ಕಡಿಯಾಳಿ ಮಹಿಷಮರ್ಧಿನಿ ದೇವಿಯೇ ಮೂರ್ಛ ಭರಿಸಿದ್ದಾಳೆ ಎಂದು ಭಕ್ತರು ಆಡಿಕೊಳ್ಳುತ್ತಿದ್ದಾರೆ. ದೇವಸ್ಥಾನದ ಕಾವಲುಗಾರನ ಕರ್ತವ್ಯ ಪ್ರಜ್ಞೆಗೂ ಶ್ಲಾಘನೆ ವ್ಯಕ್ತವಾಗಿದೆ.
0 ಕಾಮೆಂಟ್‌ಗಳು