ಮಹಾತ್ಮ ಗಾಂಧಿ ಪ್ರೌಢಶಾಲೆ ಸಾಹೇಬರಕಟ್ಟೆ ಇದರ 2025 - 26 ನೇ ಸಾಲಿನ ವಿದ್ಯಾರ್ಥಿ ಸಂಸತ್ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಜರಗಿತು. ಸಂಸ್ಥೆಯ ಹೆಮ್ಮೆಯ ಹಿಂದಿನ ವಿದ್ಯಾರ್ಥಿ, ಸ್ಥಳೀಯ ವಿನಾಯಕ ಯುವಕ ಮಂಡಲದ ಮಾಜಿ ಅಧ್ಯಕ್ಷ ಹಾಗೂ ಸ್ಥಳೀಯ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀ ಶರತ್ ಪೂಜಾರಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಪ್ರಮಾಣವಚನ ಬೋಧಿಸಿ ಮಾತನಾಡುತ್ತಾ "ಎಳವೆಯಲ್ಲಿಯೇ ವಿದ್ಯಾರ್ಥಿಗಳಲ್ಲಿ ನಾಯಕತ್ವವನ್ನು ಮೂಡಿಸಲು ಸಂಸದೀಯ ಮಾದರಿಯಲ್ಲಿ ಚುನಾವಣೆ ನಡೆಸಿ ಪ್ರಜಾಪ್ರಭುತ್ವದಲ್ಲಿ ತಮ್ಮ ಸ್ಥಾನಮಾನಗಳನ್ನು ಅರಿಯುವಂತೆ ಮಾಡಿರುವುದು ಹೆಮ್ಮೆ ಅನಿಸುತ್ತಿದೆ. ಆ ನಿಟ್ಟಿನಲ್ಲಿ ಈ ಶಾಲಾ ವಿದ್ಯಾರ್ಥಿ ಸಂಸತ್ತು ಮಾದರಿಯಾಗಲಿ. ಈ ಮಾದರಿ ನಾಯಕತ್ವ ರೂಪಿಸುವ, ತನ್ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಮಿಸುವ ಸಂಸ್ಥೆಯ ಎಲ್ಲಾ ಅಧ್ಯಾಪಕರ ಶ್ರಮ ನಿಜಕ್ಕೂ ಶ್ಲಾಘನೀಯ" ಎಂದು ತಿಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯ ಶಿಕ್ಷಕ ಸತೀಶ್ ನಾಯ್ಕ್ ವಹಿಸಿದ್ದರು. ವಿದ್ಯಾರ್ಥಿನಿಯರಾದ ಕುಮಾರಿ ರೋಶನಿ ಸ್ವಾಗತಿಸಿ ಜಿಲ್ಲಾ ಇಂಟರ್ಯಾಕ್ಟ್ ಪ್ರತಿನಿಧಿ ಕುಮಾರಿ ಪವಿತ್ರ ಕಾರ್ಯಕ್ರಮ ನಿರ್ವಹಿಸಿದ್ದರು ಕುಮಾರ ಪುನೀತ್ ವಂದಿಸಿದರು. ಸಮಾಜ ವಿಜ್ಞಾನ ಶಿಕ್ಷಕಿ ಯಶೋಧ ಕಾರ್ಯಕ್ರಮ ಸಂಯೋಜಿಸಿದ್ದರು.

0 ಕಾಮೆಂಟ್‌ಗಳು