ಮರಗಳಂತೆ ಸೆಟೆದು ನಿಂತಾಗ ಬೀಳುವ ಅಪಾಯವಿದೆ, ಸಣ್ಣ ಸಸಿಗಳು ಬಾಗುವುದರಿಂದ ದೀರ್ಘಕಾಲ ಬಾಳುತ್ತವೆ. ಅಂತೆಯೇ ಮಾನವ ಅಹಂಕಾರವನ್ನು ತ್ಯಜಿಸಿ, ಬಾಗಿ ಗೌರವಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿಗಳು ಪ್ರಜ್ಞಾವಂತ ನಾಗರಿಕರಾಗಿ ಸಮಾಜದ ರಕ್ಷಣೆಗಾಗಿ ನಿಲ್ಲಬೇಕು. ಕಾಲೇಜಿನ ಕೀರ್ತಿ ಪತಾಕೆಯನ್ನು ಬಹು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಉಡುಪಿ ಶ್ರೀ ಅದಮಾರು ಮಠದ ಹಿರಿಯ ಸ್ವಾಮೀಜಿ, ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು.
ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜು, ಉಡುಪಿ, ಇಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆಸಿದ ಮೂರು ದಿನಗಳ "ಶೈಕ್ಷಣಿಕ ಮಾರ್ಗದರ್ಶನ -ಪರಿಚಯ" ಕಾರ್ಯಕ್ರಮ ಉದ್ಘಾಟಿಸಿ, ಶ್ರೀಪಾದರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಶ್ರೀ ಅದಮಾರು ಮಠ ಎಜುಕೇಶನ್ ಕೌನ್ಸಿಲ್, ಬೆಂಗಳೂರು ಇದರ ಗೌರವ ಕಾರ್ಯದರ್ಶಿಯವರಾದ
ಡಾ. ಎ ಪಿ ಭಟ್ ರವರು ಪೂರ್ಣಪ್ರಜ್ಞ ವಿದ್ಯಾಸಂಸ್ಥೆಗೆ ತನ್ನದೇ ಆದ ವೈಶಿಷ್ಟ್ಯವಿದೆ, ಇಲ್ಲಿ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅಸಾಧ್ಯವಾದುದನ್ನು ಸಾಧಿಸುವ ಛಲ ನಿಮ್ಮಲ್ಲಿರಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ. ಎಸ್ ಚಂದ್ರಶೇಖರ್, ಗೌರವ ಕೌಶಾಧಿಕಾರಿ ಸಿ.ಎ ಪ್ರಶಾಂತ್ ಹೊಳ್ಳ, ಪೂರ್ಣಪ್ರಜ್ಞ ಕಾಲೇಜು ಸಮೂಹ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಪಿ. ಎಸ್. ಐತಾಳ್ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾಲೇಜು ಪ್ರಾಂಶುಪಾಲರಾದ ಡಾ.ರಾಮು. ಎಲ್ ರವರು 2025- 26ನೇ ಸಾಲಿನ ವಿದ್ಯಾರ್ಥಿಗಳ ದಾಖಲಾತಿ ವರದಿಯನ್ನು ಮಂಡಿಸಿದರು.
ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಗಳಾದ ಡಾ.ರಮೇಶ್ ಟಿ.ಎಸ್, ಶ್ರೀಮತಿ ಜಯಲಕ್ಷ್ಮಿ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ, ಡಾ. ವಿಜಯಲಕ್ಷ್ಮಿ ಸಿ. ಭಟ್, ಕಾಲೇಜು ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕರಾದ ಡಾ.ವಿನಯ್ ಕುಮಾರ್. ಡಿ ಇವರು ಉಪಸ್ಥಿತರಿದ್ದರು. ಉಪನ್ಯಾಸಕಿ ಶ್ರೀಮತಿ ಪ್ರೀತಾ ಮೈಪಾಡಿ ಯವರು ಕಾರ್ಯಕ್ರಮ ನಿರ್ವಹಿಸಿದರು.
0 ಕಾಮೆಂಟ್‌ಗಳು