ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನಲ್ಲಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಗಣಕ ವಿಜ್ಞಾನ ವಿಷಯಕ್ಕೆ ಹೆಚ್ಚಿನ ಬೇಡಿಕೆಯಿಂದ ಹೆಚ್ಚುವರಿ ವಿಭಾಗಕ್ಕೆ ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಕಂಪ್ಯೂಟರ್ ಲ್ಯಾಬ್‌ನ್ನು ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ|ಪಿ.ಎಸ್.ಐತಾಳ್‌ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಸಂತೋಷ್ ಕುಮಾರ್, ವಿಭಾಗದ ಅಧ್ಯಾಪಕರಾದ ಸುಧಾ ಕೆ, ಸ್ವಾತಿ, ದಿವ್ಯಾ ರಾವ್, ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ|ಶ್ರೀಮತಿ ಪಿ ಎಸ್ ರಾವ್ ಕಾರ್ಯಕ್ರಮದಲ್ಲಿ ಭಾಗಿಯಾದರು.
0 ಕಾಮೆಂಟ್‌ಗಳು