2024-25ನೇ ಸಾಲಿನಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ಸಾಣೂರು ಗ್ರಾಮದ ವಿದ್ಯಾರ್ಥಿಗಳು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಹಾಗೂ ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಗೌರವ ಅಭಿನಂದನಾ ಕಾರ್ಯಕ್ರಮವು ಜೇಸಿ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳ ಇದರ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈಗೀನ ಸ್ಪರ್ಧಾ ಜಗತ್ತಿನಲ್ಲಿ ಸಾಣೂರು ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯು ಖಾಸಗಿ ಶಾಲೆಗಳಿಗೆ ಸ್ಪರ್ಧೆಯನ್ನು ನೀಡುವುದರೊಂದಿಗೆ ಒಳ್ಳೆಯ ಫಲಿತಾಂಶವನ್ನು ಗಳಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಹಾಗೂ ಸಾಣೂರು ಗ್ರಾಮದ SSLC ಮತ್ತು PUC ಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಿ ಅವರಿಗೆ ಪ್ರೋತ್ಸಾಹ ನೀಡುತ್ತಿರುವ ಯುವಕ ಮಂಡಲದ ಕಾರ್ಯವು ಶ್ಲಾಘನೀಯ. ಇದರಿಂದ ಮುಂದಿನ ವರ್ಷಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತೇಜನ ಸಿಗುತ್ತದೆ. ಎಂದು ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಶ್ರೀಮತಿ ಸುಚೇತ ಕಾಮತ್ ಇವರು ನೆರವೇರಿಸಿ ಪ್ರತಿ ವರ್ಷ ಯುವಕ ಮಂಡಲದಿಂದ ಸಿಗುವಂತಹ ಪ್ರೋತ್ಸಾಹವನ್ನು ಸ್ಮರಿಸಿದರು.
ಮುಖ್ಯ ಅತಿಥಿಗಳಾಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀಮತಿ ಲವೀನಾ ಮೇಲ್ವಿಟಾ ನೋರೋನ್ಹ ಭಾಗವಹಿಸಿ ತಮ್ಮ ಶಾಲೆಯ ಒಳ್ಳೆಯ ಫಲಿತಾಂಶಕ್ಕೆ ಸಹಕರಿಸುತ್ತಿರುವ ಯುವಕ ಮಂಡಲ, ಶಿಕ್ಷಕ ವೃಂದ ದವರಿಗೆ ಹಾಗೂ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಮಂಡಲದ ಮಾಜಿ ಅಧ್ಯಕ್ಷರುಗಳಾದ ಮಹೇಶ್ ಕುಮಾರ್, ಶಂಕರ್ ಶೆಟ್ಟಿ, ದೇವಾನಂದ ಶೆಟ್ಟಿ, ಪ್ರಕಾಶ್ ಮಡಿವಾಳ, ಜಗದೀಶ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಯಕರ್ನಾಟಕ ಜನಪರ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುದ್ದಣ್ಣ ನಗರ ಸಾಣೂರು ಇಲ್ಲಿಯ ಶಿಕ್ಷಕಿ ಶ್ರೀಮತಿ ಗೀತಾ ಇವರಿಗೆ ಸನ್ಮಾನಿಸಲಾಯಿತು. ಇವರ ಸನ್ಮಾನ ಪತ್ರವನ್ನು ಜೊತೆ ಕಾರ್ಯದರ್ಶಿ ಪ್ರಮಿತ್ ಸುವರ್ಣ ವಾಚಿಸಿದರು. SSLC ಮತ್ತು PUC ಯ 36 ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಅಭಿನಂದನಾ ಪಟ್ಟಿಯನ್ನು ಕಾರ್ಯದರ್ಶಿ ಪ್ರಕಾಶ್ ರಾವ್ ವಾಚಿಸಿದರು.
ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ಶುಭಕರ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಶ್ ಪೂಜಾರಿ, ಕ್ರೀಡಾ ಕಾರ್ಯದರ್ಶಿಯವರಾದ ವಿದ್ಯಾನಂದ ಕೋಟ್ಯಾನ್, ಪ್ರವೀಣ್ ಶೆಟ್ಟಿ, ಹಾಗೂ ಸದಸ್ಯರಾದ ಮರಳಿಧರ ಸುವರ್ಣ, ಪ್ರಭಾಕರ್ ಶೆಟ್ಟಿ, ಜಿತೇಶ್ ರಾವ್, ವಿಘ್ನೇಶ್ ರಾವ್, ಸುದರ್ಶನ್ ನಾಯ್ಕ್, ಅನಿಲ್ ಕೋಟ್ಯಾನ್, ರಮೇಶ್ ಪೂಜಾರಿ, ಗಣೇಶ್ ಶೆಟ್ಟಿ, ಮತ್ತಿತರರು ಭಾಗವಹಿಸಿದ್ದರು. ಮಂಡಲದ ಅಧ್ಯಕ್ಷರಾದ ಗುರುಪ್ರಸಾದ್ ಶೆಟ್ಟಿ ಪ್ರಾಸ್ತವಿಕ ಮಾತನಾಡಿ ಸ್ವಾಗತಿಸಿದರು. ಮೋಹನ್ ಶೆಟ್ಟಿ ಸಾಣೂರು ಕಾರ್ಯಕ್ರಮ ನಿರ್ವಹಿಸಿ ಸತೀಶ್ ಮಡಿವಾಳ ವಂದಿಸಿದರು.
0 ಕಾಮೆಂಟ್‌ಗಳು