BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಅಪರಾಧ

ಗಂಗೊಳ್ಳಿ: ದನ ಕಳ್ಳತನಕ್ಕೆ ಯತ್ನಿಸಿದ ಇಬ್ಬರ ಬಂಧನ!

ದಿನಾಂಕ 06/07/2025 ರಂದು ಬೆಳಿಗ್ಗಿನ ಜಾವ 04:00 ಗಂಟೆಯ ಸುಮಾರಿಗೆ ನಾಡಾ ಗ್ರಾಮ ಪಂಚಾಯತ್‌ ಸಮೀಪ ಒಂದು ಬಿಳಿ ಬಣ್ಣದ ಕಾರಿನಲ್ಲಿ ಮೂರು ಜನರು ಬಂದು ನಾಡಾ ಶಾನ್‌ ಮೆಡಿಕಲ್‌ ಪಕ್ಕದಲ್ಲಿ ಮಲಗಿರುವ ದನಗಳನ್ನು ಕಾರಿಗೆ ತುಂಬಲು ಪ್ರಯತ್ನಿಸುವ ದಾರಿಯಲ್ಲಿನ ವಾಹನವನ್ನು ನೋಡಿ ದನವನ್ನು ತುಂಬಿಸಲು ಪ್ರಯತ್ನಿಸಿದವರು ಓಡಿ ಹೋಗಿದ್ದು, ಅರೋಪಿತರು ಶಾನ್‌ ಮೆಡಿಕಲ್‌ ಸಮೀಪ ಮಲಗಿರುವ ದನಗಳನ್ನು ಕಳವು ಮಾಡುವ ಉದ್ದೇಶದಿಂದ ಬಂದಿದ್ದು ದನವನ್ನು ಕಳವು ಮಾಡಲು ಪ್ರಯತ್ನಿಸಿರುತ್ತಾರೆ ಎಂಬಿತ್ಯಾದಿಯಾಗಿ ನೀಡಿದ ದೂರಿಗೆ ಸಂಬಂಧಿಸಿ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 76/2025 ಕಲಂ 303(2), 62 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

 ಸದ್ರಿ ಪ್ರಕರಣ ಪತ್ತೆ ಮಾಡುವರೇ ಗಂಗೊಳ್ಳಿ ಪೊಲೀಸ್‌ ಠಾಣೆಯಿಂದ ವಿಶೇಷ ತಂಡ ರಚಿಸಿ ದಿನಾಂಕ 14/07/2025 ರಂದು ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿಗಳಾದ 1)ನೌಫಲ ಪ್ರಾಯ:23 ವರ್ಷ ತಂದೆ:ಹಸನಬ್ಬ ವಾಸ:ಹೊನ್ನಾಳ, ಬೈಕಾಡಿ ಬ್ರಹ್ಮಾವರ ತಾಲೂಕು 2)ನಿಶಾದ್‌ ಪ್ರಾಯ:23 ವರ್ಷ ತಂದೆ:ಮೊಹಮ್ಮದ್‌ ಇಕ್ಬಾಲ್‌ ವಾಸ:ಮಾವಿನಕಟ್ಟೆ, ಗುಲ್ವಾಡಿ ಗ್ರಾಮ ಕುಂದಾಪುರ ತಾಲೂಕು ರನ್ನು ವಶಕ್ಕೆ ಪಡೆದುಕೊಂಡು ದಸ್ತಗಿರಿ ಮಾಡಿ ದಿನಾಂಕ 15/07/2025 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸದ್ರಿ ಪ್ರಕರಣದಲ್ಲಿ ಕೃತ್ಯಕ್ಕೆ ಬಳಸಿದ KA20ME9173 ನಂಬ್ರದ ಬಿಳಿ ಬಣ್ಣದ ಸ್ವೀಪ್ಟ್‌ ಕಾರ್‌ ( ಅಂದಾಜು ಮೌಲ್ಯ 5 ಲಕ್ಷ ರೂಪಾಯಿ) ಹಾಗೂ 2 ಮೊಬೈಲ್‌ ಪೋನ್ ಗಳನ್ನು (ಅಂದಾಜು ಮೌಲ್ಯ 9 ಸಾವಿರ) ಸ್ವಾದೀನಪಡಿಸಿಕೊಳ್ಳಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!