Header Ads Widget

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ್ ಬಿಳಿಮಲೆಯವರಿಗೆ ಕಸಾಪ ಉಡುಪಿ ತಾಲೂಕು ಘಟಕದಿಂದ ಗೌರವ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ ಉಡುಪಿ ಜಿಲ್ಲೆಗೆ ಆಗಮಿಸಿ ಕನ್ನಡ ಅಭಿವೃದ್ಧಿಯ ಬಗ್ಗೆ ವಿಶೇಷ ಸಭೆ ಮಾಡಿದ ಕನ್ನಡ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ್ ಬಿಳಿಮಲೆ ಅವರನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ, ಸದಸ್ಯ ಯಾಕುಬ್ ಖಾದರ್ ಗುಲ್ವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ| ಗಣನಾಥ ಎಕ್ಕಾರು, ಪ್ರಾಧಿಕಾರದ ಅಧಿಕಾರಿಗಳು , ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ , ಗೌರವ ಕಾರ್ಯದರ್ಶಿ ಜನಾದ೯ನ್ ಕೊಡವೂರು, ಸಾಹಿತಿ ಡಾ. ಕಾತ್ಯಾಯನಿ ಕುಂಜಿಬೆಟ್ಟು, ಪದಾಧಿಕಾರಿಗಳಾದ ರಾಘವೇಂದ್ರ ಪ್ರಭು ಕರ್ವಾಲು, ಕೃಷ್ಣಯ್ಯ, ಸಿದ್ದ ಬಸಯ್ಯಸ್ವಾಮಿ ಚಿಕ್ಕ ಮಠ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು