Header Ads Widget

ಉಡುಪಿ : ಭಾರೀ ಮಳೆ ಹಿನ್ನಲೆ; ಜುಲೈ 17ರಂದು ಅಂಗನವಾಡಿ-ಶಾಲೆಗಳಿಗೆ ರಜೆ ಘೋಷಣೆ!

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 17 ರಂದು ಗುರುವಾರ (ನಾಳೆ) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆದೇಶ ಹೊರಡಿಸಿದ್ದಾರೆ.

ಅಲ್ಲದೆ ಜಿಲ್ಲೆಯ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ, ಐಟಿಐ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು