Header Ads Widget

​ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ

 ​

ಉಡುಪಿ: ರಾಜಕೀಯ ಲಾಭಕ್ಕಾಗಿ ಕೋಮು ಸಂಘರ್ಷ ಹಾಗೂ ಧ್ವೇಷ ಭಾಷಣದ ಮೂಲಕ ಕರಾವಳಿ ಯಲ್ಲಿ ಕೋಮು ಸಾಮರಸ್ಯ ಹಾಳುವ ಮಾಡುವ ಕಾರ್ಯ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಧ್ವೇಷದ ವಾತಾವರಣ ಬೇಕೆ ಅಥವಾ ಅಭಿವೃದ್ಧಿ ಬೇಕೆ ಎಂಬುದರ ಬಗ್ಗೆ ಚರ್ಚೆ ಮಾಡಬೇಕು. 


ಆ ಮೂಲಕ ಜಿಲ್ಲೆಯಲ್ಲಿ ಸಾಮರಸ್ಯದ ವಾತಾವರಣ ನಿರ್ಮಿಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ. ಬನ್ನಂಜೆ ಶ್ರೀನಾರಾಯಣ ಗುರು ಸಭಾಭವನದಲ್ಲಿ ಶುಕ್ರವಾರ ನಡೆದ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರ ಹಾಗೂ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.  ​


ಸಂಕಲ್ಪ, ಸರ್ಮಪಣೆ ಮೂಲಕ ಸಂಘರ್ಷವನ್ನು ಬದಿಗೊತ್ತಿ ತಳಮಟ್ಟದಿಂದಲೇ ಪಕ್ಷವನ್ನು ಕಟ್ಟಬೇಕು ಮತ್ತು ಮಹಿಳಾ ಮತದಾರರನ್ನು ಸಂಘಟಿಸಬೇಕು. ಜಾತಿ ಧರ್ಮದ ತಾರತಮ್ಯ ಇಲ್ಲದೇ ಎಲ್ಲರನ್ನು ಒಗ್ಗೂಡಿಸಿ ಕೊಂಡು ಕರೆದೊಯ್ಯುವ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಆ ಹಣದಿಂದ ಹೊಸಹೊಸ ವ್ಯವಹಾರ ಆರಂಭಿಸಿದ್ದಾರೆ, ಕೆಲವರು ಮಕ್ಕಳ ಶಿಕ್ಷಣ, ಆರೋಗ್ಯಕ್ಕೆ ಬಳಸಿ ಕೊಂಡಿದ್ದಾರೆ.


 ಉಚಿತ ಬಸ್ ಪ್ರಯಾಣದಿಂದ ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾಭಿಮಾನದಿಂದ ಎಲ್ಲ ಕಡೆ ತಿರುಗಾಡುತ್ತಿದ್ದಾರೆ. ಮುಂದಿನ ಪೀಳಿಗೆಯನ್ನು ಗಮನದಲ್ಲಿರಿಸಿಕೊಂಡು ಮಹಿಳೆಯರ ಕೈ ಬಲ ಪಡಿಸಲು ಸರಕಾರ ಈ ಎಲ್ಲ ಯೋಜನೆಗಳನ್ನು ಜಾರಿಗೆ ತಂದಿದೆ. 


ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ಯಾರಂಟಿ ಫಲಾನುಭವಿಗಳ ಸಭೆ ನಡೆಸಿ ಅದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತ ನಾಡಿ, ಯಾವುದೇ ಸರಕಾರ ಇಂದು ಅಧಿಕಾರಕ್ಕೇರಲು ಮಹಿಳಾ ಮತದಾರರು ಮುಖ್ಯ. ಅವರ ಸಂಖ್ಯೆಯೇ ಹೆಚ್ಚಾಗಿರುವುದರಿಂದ ಅವರೇ ನಿರ್ಣಾಯಕರು ಆಗಿದ್ದಾರೆ. 


ಅದನ್ನು ಅರ್ಥ ಮಾಡಿಕೊಂಡು ಅವರಿಗೆ ಸ್ಥಾನಮಾನ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸರಕಾರದ ಬಗ್ಗೆ ಬಿಜೆಪಿಯವರು ನಡೆಸುತ್ತಿರುವ ಅಪಪ್ರಚಾರದ ವಿರುದ್ಧ ನಮ್ಮ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.  ನಿಗರ್ಮನ ಅಧ್ಯಕ್ಷೆ ಗೀತಾ ವಾಗ್ಳೆ ನೂತನ ಅಧ್ಯಕ್ಷೆ ಜ್ಯೋತಿ ಕೃಷ್ಮ ಹೆಬ್ಬಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು.  ​  ​​

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು