BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ
[ಹೋಮ್] ತಿಂಗಳ ಪಾಪ್ಯುಲರ್ ಸುದ್ದಿಗಳು

Krishna Mata Astami 2026

Krishna Mata Astami 2026
ಆಚಾರ ವಿಚಾರ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ: ರಾಜ್ಯಪಾಲರಿಂದ ಚಾಲನೆ

ಉಡುಪಿ​ ಪರ್ಯಾಯ ಪುತ್ತಿಗೆ ಶ್ರೀಕೃಷ್ಣಮಠ ಆಶ್ರಯದಲ್ಲಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ದ್ವಿತೀಯಾರ್ಧದಲ್ಲಿ ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶ್ರೀಕೃಷ್ಣ ಮಠದ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ 48 ದಿನಗಳ ಪರ್ಯಂತ ನಡೆಸಲುದ್ದೇಶಿ ಸಲಾಗಿದೆ. ಆ. 1ರಿಂದ ಸೆ. 17ರ ವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ನಡೆಯಲಿದೆ.




ಜು. 25ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.​ ಕಳೆದ ಬಾರಿ ಶ್ರೀಕೃಷ್ಣ ಮಾಸೋತ್ಸವ ಎಂಬುದಾಗಿ ಒಂದು ತಿಂಗಳ ಪರ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗಿತ್ತು. 



ಜು. 25ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.​ ಕಳೆದ ಬಾರಿ ಶ್ರೀಕೃಷ್ಣ ಮಾಸೋತ್ಸವ ಎಂಬುದಾಗಿ ಒಂದು ತಿಂಗಳ ಪರ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗಿತ್ತು. ಈ ಬಾರಿ ಆ.15ರಂದು ಚಾಂದ್ರ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ. 14ರಂದು ಸೌರ ಕೃಷ್ಣ ಜಯಂತಿ ಆಚರಿಸುವ ಮೂಲಕ ಶ್ರೀಕೃಷ್ಣ ಜಯಂತಿಯನ್ನು ಪರಿಪೂರ್ಣವಾಗಿ ​ಧಾರ್ಮಿಕ  ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು ಎಂದರು.


ಜು.25ರಂದು ಅಪರಾಹ್ನ 4.30 ಗಂಟೆಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಹಾಗೂ ಅದಮಾರು ಹಿರಿಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಲಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಯಶಪಾಲ್ ಸುವರ್ಣ ಮತ್ತು ​ಗುರ್ಮೆ  ಸುರೇಶ ಶೆಟ್ಟಿ, ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್, ಉದ್ಯಮಿಗಳಾದ ರಾಘವೇಂದ್ರ ರಾವ್ ಬೆಂಗಳೂರು, ​ಸ್ವರ್ಣೋ ದ್ಯಮಿ  ವಿಷ್ಣುಶರಣ್ ಹಾಗೂ ಬಾಳೆಕುದ್ರು ರಾಮಚಂದ್ರ ಉಪಾಧ್ಯಾಯ ಆಗಮಿಸುವರು ಎಂದು ಮಠದ ದಿವಾನ ನಾಗರಾಜ ಆಚಾರ್ಯ ವಿವರಿಸಿದರು.



ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವವನ್ನು ಜ್ಞಾನ ಮಂಡಲೋತ್ಸವ (ಪ್ರವಚನ), ವೇಣು ಮಂಡಲೋತ್ಸವ (ಕೊಳಲು ವಾದನ), ಭಜನಾ ಮಂಡಲೋತ್ಸವ, ನೃತ್ಯ ಮಂಡಲೋತ್ಸವ ಹಾಗೂ ಕಲಾ ಮಂಡಲೋತ್ಸವ ಎಂಬುದಾಗಿ ಆಚರಿಸಲಾಗುವುದು ಎಂದು ಸಾಂಸ್ಕೃತಿಕ   ಕಾರ್ಯದರ್ಶಿ   ರಮೇಶ ಭಟ್ ಮಾಹಿತಿ ನೀಡಿದರು.



ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಮಠದ ವಿದೇಶ ವ್ಯವಹಾರಗಳ ​ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರವೀಂದ್ರ ಆಚಾರ್ಯ ಸುದ್ದಿಗೋಷ್ಟಿಯಲ್ಲಿ​ ಉಪಸ್ಥಿತರಿದ್ದರು. 

Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!