Header Ads Widget

ಮಣಿಪಾಲ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್!

ಮಣಿಪಾಲಕ್ಕೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಘಟನೆ ಜು.23ರ ಬುಧವಾರ ಬೆಳಗ್ಗೆ ಮಣಿಪಾಲದ ಲಕ್ಷ್ಮೀಂದ್ರನಗರದ ಬಳಿ ನಡೆದಿದೆ.

ದಾವಣಗೆರೆಯಿಂದ ಮಣಿಪಾಲಕ್ಕೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಅತೀ ವೇಗದಿಂದ ಆಗಮಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ  ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ಮಧ್ಯೆ ಡಿವೈಡರ್ ಗೆ ಅಳವಡಿಸಿದ್ದ ರೇಲಿಂಗ್ ಹಾಗೂ ಜಾಹೀರಾತು ಫಲಕಗಳು ಸಂಪೂರ್ಣ  ನಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗವು ಜಖಂಗೊಂಡಿದೆ. ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸ್ ದಾವಣಗೆರೆಯಿಂದ ಉಡುಪಿಗೆ ಆಗಮಿಸಿ ಅಲ್ಲಿಂದ ಮಣಿಪಾಲಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು