ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣbಸರಣಿ ಕಾರ್ಯಕ್ರಮದ 169ನೇ ಸಂಚಿಕೆ ಜುಲೈ ತಿಂಗಳ ದಿನಾಂಕ 26ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು ಮತ್ತು ಆರಕ್ಷಕ ಶಿಕ್ಷಕರಾದ ಯೋಗೇಶ್ ವಿಶ್ವಾಲಯ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಜುಲೈ 27 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.
0 ಕಾಮೆಂಟ್‌ಗಳು