BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಅಪರಾಧ

ಕುಖ್ಯಾತ ಅಂತರ್ ಜಿಲ್ಲಾ ಕಳ್ಳ ಅಬೂಬಕ್ಕರ್‌ @ ಅಬ್ದುಲ್‌ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್‌ ಬಂಧನ

ದಿನಾಂಕ 27.06.2025 ರಂದು ರಾತ್ರಿ ವೇಳೆ ಶಿರ್ವ ಗ್ರಾಮದ ಮಟ್ಟಾರು ರಸ್ತೆಯ ಬಳಿ ಇರುವ ಶ್ರೀಮತಿ ಪವಿತ್ರ ಪೂಜಾರ್ತಿಯವರ ಮನೆಯಲ್ಲಿ ಅವರು ಮತ್ತು ಮಗ ಮಲಗಿರುವಾಗಲೇ ಕಿಟಕಿ ಹುಕ್ಸ್ ಮುರಿದು, ಬಾಗಿಲಿನ ಚಿಲಕವನ್ನು ಹುಕ್ಸ್ ನ್ನು ಕಟ್ಟಿದ ಕೋಲಿನಿಂದ ಎಳೆದು ಬಾಗಿಲು ತೆಗೆದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ಸುಮಾರು 137 ಗ್ರಾಂ ತೂಕದ ಚಿನ್ನಾಭರಣಗಳನ್ನು (ಅಂದಾಜು ಮೌಲ್ಯ ರೂ. 12,75,000/-) ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳವು ನಡೆದಿರುವ ವಿಧಾನವನ್ನು ಅವಲೋಕಿಸಿದ ಪೊಲೀಸರು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಂ ಶಂಕರ್ ರವರ ಮಾರ್ಗದರ್ಶನದಲ್ಲಿ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ. ಸುಧಾಕರ ಎಸ್ ನಾಯ್ಕ್ , ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷ ಪ್ರಿಯಂವದಾ ರವರ ನೇತೃತ್ವದಲ್ಲಿ , ತನಿಖಾಧಿಕಾರಿ ಕಾಪು ವೃತ್ತ ನಿರೀಕ್ಷಕರಾದ ಜಯಶ್ರೀ ಎಸ್ ಮಾನೆ ರವರ ನೇತೃತ್ವದ ತಂಡ ಪತ್ತೆಕಾರ್ಯಾಚರಣೆ ನಡೆಸಿ ಕುಖ್ಯಾತ ಅಂತರ್ ಜಿಲ್ಲಾ ಕಳ್ಳ ಅಬೂಬಕ್ಕರ್‌ @ ಅಬ್ದುಲ್‌ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್‌ ನನ್ನು ದಸ್ತಗಿರಿ ಮಾಡಿ, ಆತನಿಂದ ಒಟ್ಟು 66.760 ಗ್ರಾಂ ತೂಕದ ಚಿನ್ನಾಭರಣಗಳನ್ನು ಮತ್ತು ಕೃತ್ಯದ ವೇಳೆ ಪ್ರಯಾಣಕ್ಕೆ ಬಳಸಿದ ಜುಪಿಟರ್‌ ಸ್ಕೂಟರನ್ನು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯ ರೂ. 7,00,000/= ಆಗಿರುತ್ತದೆ. ಈ ಆರೋಪಿಯ ವಿರುದ್ಧ ಸುಮಾರು 30 ಕ್ಕಿಂತ ಹೆಚ್ಚು ಕಳವು ಪ್ರಕರಣಗಳು ದಾಖಲಾಗಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ಕಾಪು ವೃತ್ತ ನಿರೀಕ್ಷಕರಾದ ಜಯಶ್ರೀ ಎಸ್ ಮಾನೆ ರವರ ಜೊತೆ ಶಿರ್ವ ಠಾಣಾ ಉಪ ನಿರೀಕ್ಷಕರಾದ ಶ್ರೀ. ಮಂಜುನಾಥ ಮರಬದ, ಶ್ರೀ.ಲೋಹಿತ್ ಕುಮಾರ್ ಎಸ್, ಪಡುಬಿದ್ರೆ ಪೊಲೀಸ್ ಉಪ ನಿರೀಕ್ಷಕರಾದ ಶ್ರೀ. ಅನಿಲ್ ಕುಮಾರ್ ಟಿ ನಾಯ್ಕ್, ಕಾಪು ಪೊಲೀಸ್ ಉಪ ನಿರೀಕ್ಷಕರಾದ ಶ್ರೀ. ಮಹೇಶ ಟಿ ಎಂ ಮತ್ತು ಸಿಬ್ಬಂದಿಯವರಾದ ಮಂಜುನಾಥ ಅಡಿಗ, ಅನ್ವರ್ ಆಲಿ, ಸಿದ್ಧರಾಯಪ್ಪ, ಕಿರಣ್, ಮಂಜುನಾಥ ಹೊಸಮನಿ, ಬಸವರಾಜ್, ಪ್ರಕಾಶ್ ಸುವರ್ಣ ಹಾಗೂ ಶ್ರೀಧರ್‌ ಶೆಟ್ಟಿಗಾರ್‌‌, ಹಾಗೂ ವೃತ್ತ ಕಛೇರಿಯ ಸಿಬ್ಬಂದಿಯವರಾದ ರಿಯಾಜ್‌ ಅಹ್ಮದ್‌, ಶರಣಪ್ಪ, ಜೀವನ್‌‌‌, ಪಾವನಾಂಗಿ, ದಿನೇಶ್‌ ಮತ್ತು ಜೀಪು ಚಾಲಕರಾದ ಜಗದೀಶ್‌‌, ಪ್ರಕಾಶ್‌‌‌ ರವರು ಭಾಗವಹಿಸಿರುತ್ತಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!