Header Ads Widget

ಉಚ್ಚಿಲ ದಸರಾ-2025

 

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ವರ್ಷ 4ನೇ ಬಾರಿಗೆ ಉಡುಪಿ – ಉಚ್ಚಿಲ ದಸರಾ-2025 ಉತ್ಸವವು ಕ್ಷೇತ್ರದ ಸದ್ಭಕ್ತರ ಹಾಗೂ ದಾನಿಗಳ ಸಹಕಾರ- ಸಹಯೋಗದಿಂದ ಶಿಸ್ತು ಬದ್ಧ ಹಾಗೂ ಸಾಂಪ್ರಾದಾಯಿಕವಾಗಿ ಜನಾಕರ್ಷಣೆಯ ದಸರಾ ಉತ್ಸವವಾಗಿ ಆಯೋಜನೆ ಮಾಡಲು ಸಂಕಲ್ಪ ಮಾಡಲಾಗಿದ್ದು, ಎಲ್ಲರೂ ಸಹಕರಿಸುವಂತೆ ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್‌ರವರು ಮನವಿ ಮಾಡಿದರು.


ಭಾನುವಾರ ಸಂಜೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಮೊಗವೀರ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು,


ಪ್ರತೀದಿನ ಚಂಡಿಕಾಯಾಗ, ಕಲ್ಲೋಕ್ತ ಪೂಜೆ, ಸಾಮೂಹಿಕ ಕುಂಕುಮಾರ್ಚನೆ, ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಭಿನ್ನ ರೀತಿಯ ವಸ್ತು ಪ್ರದರ್ಶನದೊಂದಿಗೆ ವೈಭ ವೋಪೇತ ವಿಸರ್ಜನಾ ಮೆರವಣಿಗೆ ಆಚರಿಸಲು ಇಂದು ನಡೆದ ಸಭೆಯಲ್ಲಿ ಚರ್ಚಿಸ ಲಾಯಿತು.


 ಸಭೆಯಲ್ಲಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಉಡುಪಿ ಶಾಸಕ ಯಶಪಾಲ್ ಎ ಸುವರ್ಣ, ಉಡುಪಿ – ಉಚ್ಚಿಲ ದಸರಾ ಸಮಿತಿಯ ಅಧ್ಯಕ್ಷ ವಿನಯ ಕರ್ಕೇರ, ದ.ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಮೋಹನ್ ಬೆಂಗ್ರೆ, ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು,  ಬಗ್ವಾಡಿ ಹೋಬಳಿ ಮೊಗವೀರ ಮಹಾಜನ ಸೇವಾ ಸಂಘ (ರಿ) ಕುಂದಾಪುರ ಇದರ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ದ.ಕ. ಮೊಗವೀರ ಮಹಾಜನ ಸಂಘದ ಮಹಿಳಾ ಘಟಕಾಧ್ಯಕ್ಷೆ ಉಷಾರಾಣಿ ಬೋಳೂರು, ಅನಿಲ್ ಕುಮಾರ್ ಬೊಕ್ಕಪಟ್ಟ, ರತ್ನಾಕರ್ ಸಾಲ್ಯಾನ್, ಸುಜಿತ್ ಸಾಲ್ಯಾನ್, ಹರಿಯಪ್ಪ ಆರ್.ಕೋಟ್ಯಾನ್, ಶ್ರೀಪತಿ ಭಟ್ ಉಚ್ಚಿಲ, ಮನೋಜ್ ಕಾಂಚನ್, ಸುಗುಣ ಎಸ್‌. ಕರ್ಕೇರ ಹಾಗೂ ಆಡಳಿತ ಸಮಿತಿಯ ಸದಸ್ಯರು, ವಿವಿಧ ಸಂಘ ಸಂಸ್ಥೆ ಗಳ ಪದಾಧಿಕಾರಿಗಳು, ಸದಸ್ಯರು, ಮಹಿಳಾ ಸಂಘಟನೆಯ ಸದಸ್ಯರು ಉಪಸ್ಥಿತ ರಿದ್ದರು.


ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್ ಮಲ್ಪೆ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು