BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಕೊಡವೂರು ಗಣೇಶೋತ್ಸವ : ವಿವಿಧ ಸ್ಪರ್ಧೆಗಳಿಗೆ ಚಾಲನೆ

ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಈ ಬಾರಿ ಆಚರಿಸಲ್ಪಡುವ 57 ನೇ ಗಣೇಶೋತ್ಸವದ ಪ್ರಯುಕ್ತ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ಮಹಿಳೆಯರಿಗೆ ರಂಗವಲ್ಲಿ ಸ್ಪರ್ಧೆಯು ಆ.10ರಂದು ಸ್ಥಳೀಯ ಶ್ರೀ ಶಂಕರನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.

ಸ್ಪರ್ಧಾ ಕಾರ್ಯಕ್ರಮವನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು ಉದ್ಘಾಟಿಸಿದರು.ಮುಖ್ಯ ಅತಿಥಿ ನಿವೃತ್ತ ಶಿಕ್ಷಕಿ ಗೀತಾ ದಿನೇಶ್ ಶೆಟ್ಟಿ ಮಾತನಾಡಿ ಮಕ್ಕಳಲ್ಲಿ ಅಂತರ್ಗತವಾಗಿರುವ ಪ್ರತಿಭೆಯ ಅನಾವರಣಕ್ಕೆ ಇಂತಹ ಸ್ಪರ್ಧಾ ಕಾರ್ಯಕ್ರಮಗಳು ಉತ್ತೇಜನಕಾರಿಯಾಗಿದೆ ಹಾಗೂ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪೂರಕ ವಾತಾವರಣ ಸೃಷ್ಟಿಸಬಲ್ಲದು ಎಂದರು. ನಗರಸಭಾ ಸದಸ್ಯ ವಿಜಯ ಕೊಡವೂರು, ನ್ಯಾಯವಾದಿ ಅನಿಲ್ ಕುಮಾರ್, ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ವಾದಿರಾಜ್ ಟಿ ಸಾಲ್ಯಾನ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರಭಾತ್ ಕೋಟ್ಯಾನ್, ಗೌರವಾಧ್ಯಕ್ಷ ಕೃಷ್ಣ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್ ‌ಶೆಟ್ಟಿಗಾರ್, ಕೋಶಾಧಿಕಾರಿ ಸಂದೇಶ್ ಕೋಟ್ಯಾನ್,ಹರೀಶ್ ಕೊಡವೂರು ಪ್ರಸಾದ್ ಶ್ರೀಯಾನ್ ಉಪಸ್ಥಿತರಿದ್ದರು.

20 ವರುಷಗಳಿಂದ ನಿರಂತರವಾಗಿ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಸಹಕರಿಸುತ್ತಿರುವ ಹಿರಿಯ ಚಿತ್ರ ಕಲಾವಿದ ತಾರಾನಾಥ್ ತೊಟ್ಟಂ, ಸಂಗೀತ ಕಲಾವಿದ

ಸುನೀಲ್ ಕುಮಾರ್ ಅಂಬಲಪಾಡಿ, ತೀರ್ಪುಗಾರರಾದ ನಿವೃತ್ತ ಶಿಕ್ಷಕಿ ವಾರಿಜಾ ಮಧುಸೂಧನ್,ಸೌಮ್ಯ ಭಾಸ್ಕರ್ ಇವರನ್ನುಗೌರವಿಸಲಾಯಿತು. ಸಾಹಿತಿ ಪೂರ್ಣಿಮಾ ಜನಾರ್ದನ್ ಮಹಿಳೆಯರ ರಂಗವಲ್ಲಿ ಸ್ಪರ್ಧೆಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಇತ್ತೀಚೆಗೆ ಅಪಘಾತಕ್ಕೀಡಾದ ಸ್ಥಳೀಯ ಯುವಕನೋರ್ವ ವೈದ್ಯಕೀಯ ಚಿಕಿತ್ಸೆಗೆ ಹಾಗೂ ಜೋರಾದ ಗಾಳಿ ಮಳೆಗೆ ಆರ್ಥಿಕ ಅಶಕ್ತ ಮಹಿಳೆಯೋರ್ವರ ಮನೆಯ ಮೇಲೆ ಮರ ಬಿದ್ದು ಸಂಪೂರ್ಣ ಹಾನಿಗೊಂಡ ನಿಟ್ಟಿನಲ್ಲಿ ಅವರು ಕಟ್ಟುತ್ತಿರುವ ಹೊಸ ಮನೆಯ ನಿರ್ಮಾಣಕ್ಕೆ ಸಮಿತಿಯ ವತಿಯಿಂದ ಸಹಾಯಧನ ನೀಡಲಾಯಿತು. ಸತೀಶ್ ಕೊಡವೂರು ಸ್ವಾಗತಿಸಿ ನಿರೂಪಿಸಿದರು.ಜಗದೀಶ್ ಶೆಟ್ಟಿ ಬೆಳ್ಕಳೆ ವಂದಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!