Header Ads Widget

ಕಲ್ಯಾಣಪುರ: ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳ ಕಿಟ್ ವಿತರಣೆ

'ಉಡುಪಿಗೆ ಬನ್ನಿ' ತಂಡದ ವತಿಯಿಂದ ಆಗಸ್ಟ್ 21 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾಣಪುರ ಇಲ್ಲಿಯ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ಒಳಗೊಂಡ ಕಿಟ್ ವಿತರಿಸಲಾಯಿತು. ಮುಖ್ಯ ಶಿಕ್ಷಕಿ ಸುಮತಿ ಅವರು ಕಿಟ್ ವಿತರಣೆಗೆ ಚಾಲನೆ ನೀಡಿ ಮಾತನಾಡುತ್ತಾ, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ. ಸರಕಾರಿ ಶಾಲೆಯ ಶೈಕ್ಷಣಿಕ ವಾತಾವರಣ ಮತ್ತು ದಾಖಲಾತಿ ಹೆಚ್ಚಿಸುವಲ್ಲಿ ಸ್ಥಳೀಯರ ಭಾಗವಹಿಸುವಿಕೆ ಅತ್ಯವಶ್ಯಕ ಎಂದರು. 'ಉಡುಪಿಗೆ ಬನ್ನಿ' ಸಂಸ್ಥಾಪಕ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್ ಮಾತನಾಡುತ್ತಾ, ನಮ್ಮ ಊರಿನಲ್ಲಿರುವ ಸರಕಾರಿ ಶಾಲೆಗಳ ಉಳಿವಿಗಾಗಿ ಪ್ರತಿಯೊಬ್ಬರೂ ಪ್ರಯತ್ನಶೀಲರಾದರೆ ಸರಕಾರಿ ಶಾಲೆಗಳ ಬೆಳವಣಿಗೆ ಶತಃಸಿದ್ಧ. ಸರಕಾರಿ ಶಾಲೆಯ ವಿದ್ಯಾರ್ಥಿಗಳು ಶಾಲೆಗಳ ರಾಯಭಾರಿಗಳು. ಸಮಾಜದಲ್ಲಿ ಒಳ್ಳೆಯ ನಡವಳಿಕೆ, ಅತ್ಯುನ್ನತ ಶೈಕ್ಷಣಿಕ ಸಾಧನೆಯ ಮೂಲಕ ವಿದ್ಯಾರ್ಥಿ ಜೀವನವನ್ನು ಭವಿಷ್ಯದ ಸಾಧನೆಗೆ ಬಲಿಷ್ಠ ಮೆಟ್ಟಿಲುಗಳನ್ನಾಗಿಸಿ ಎಂದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಸಂಶೋಧನಾ ವಿದ್ಯಾರ್ಥಿ ಸಂತೋಷ್, ಶಿಕ್ಷಕಿ ಲೀಲಾ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು