Header Ads Widget

ಕಸಾಪ ಗೌರವ ಕಾರ್ಯದರ್ಶಿಯಾಗಿ ಎಚ್.ಬಿ.ಮದನಗೌಡ ನೇಮಕ

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯನ್ನಾಗಿ ಹಿರಿಯ ಪತ್ರಕರ್ತರಾದ ಎಚ್.ಬಿ.ಮದನಗೌಡ ಅವರನ್ನು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರು ನೇಮಕ ಮಾಡಿದ್ದು, ಈ ಆದೇಶ ಪತ್ರವನ್ನು ಗುರುವಾರ ಕಸಾಪ ಪ್ರಧಾನ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಗೌರವ ಕಾರ್ಯದರ್ಶಿ ಪಟೇಲ್ ಪಾಂಡು, ಕಸಾಪ ಅಂತಾರಾಷ್ಟ್ರೀಯ ಸಂಯೋಜಕಿ ನಿವೇದಿತಾ ಹಾವನೂರು, ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ, ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜೆ.ಆರ್.ಕೆಂಚೇಗೌಡ ಮತ್ತಿತರರು ಹಾಜರಿದ್ದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು