Header Ads Widget

​ಆ. 30: ಶ್ರೀ ಮಧ್ವಾಚಾರ್ಯರ ಅಂಚೆ ಚೀಟಿ ಬಿಡುಗಡೆ

ಉಡುಪಿ, ಆ. 26: ಜಗದೊಡೆಯ ಶ್ರೀ ಕೃಷ್ಣನನ್ನು ಉಡುಪಿಯಲ್ಲಿ ಪ್ರತಿಷ್ಠಾಪಿಸಿ ಅಷ್ಟ ಮಠ ಗಳಿಗೆ ಪೂಜಾ ಕೈಂಕರ್ಯ ಒಪ್ಪಿಸಿದ ಶ್ರೀ ಮಧ್ವಾಚಾರ್ಯರ ಸಂಸ್ಮರಣೆಯಲ್ಲಿ ಅವರ ಅಂಚೆ ಚೀಟಿ ಬಿಡುಗಡೆ ಆ.30ರ ಸಂಜೆ 4 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.



ಮಾಹೆ ವಿವಿಯ ​ಪ್ರಾಯೋಜಕತ್ವದಲ್ಲಿ  ಕೇಂದ್ರ ಸರಕಾರದ ಸಂವಹನ ಮತ್ತು ಭಾರತೀಯ ಅಂಚೆ ಇಲಾಖೆ ಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಕಿರಿಯಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವ ಪ್ರಿಯತೀರ್ಥ ಶ್ರೀಪಾದರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್  ಕೆ ಪ್ರಕಾಶ್ (IPOs )ಅವರು ಮಧ್ವಾಚಾರ್ಯರ ಕುರಿ ತಾದ ಅಂಚೆಚೀಟಿ​ ಬಿಡುಗಡೆ ಮಾಡಲಿದ್ದಾರೆ. 



ಪರ್ಯಾಯ ಪುತ್ತಿಗೆ ಶ್ರೀಪಾದರ ಜನ್ಮ ನಕ್ಷತ್ರದ ಶುಭ ಸಂದರ್ಭದಲ್ಲಿ ಶ್ರೀ ಮಧ್ವಚಾರ್ಯರ ಅಂಚೆ ಚೀಟಿಯ ಬಿಡುಗಡೆ ಸಂತಸದ ಸಂಗತಿಯಾಗಿದೆ ಎಂದು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಮಾಹೆ ವಿವಿ ಸಹ ಕುಲಾಧಿಪತಿ ಡಾ| ಎಚ್. ಎಸ್. ಬಲ್ಲಾಳ್, ಉಡುಪಿ ಅಂಚೆ ವಿಭಾಗದ ಅಧೀಕ್ಷಕ ರಮೇಶ್ ಪ್ರಭು​ ಪ್ರಕ ಟನೆಯಲ್ಲಿ ತಿಳಿಸಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು