Header Ads Widget

ಉಡುಪಿ : ಭಾರೀ ಮಳೆ ಹಿನ್ನೆಲೆ ಆ.19 (ಇಂದು) ಶಾಲಾ-ಪಿಯು ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ.19ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಐಟಿಐ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಕಾಲೇಜಿಗೆ ರಜೆ ಘೋಷಿಸಿರುವುದಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು