Header Ads Widget

ಉಡುಪಿ ಆದರ್ಶ ಆಸ್ಪತ್ರೆ: ವಿಶ್ವ ಸ್ತನಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಉಡುಪಿ: ಆದರ್ಶ ಆಸ್ಪತ್ರೆ ಉಡುಪಿ, ಆದರ್ಶ ಸಮೂಹ ಸಂಸ್ಥೆಗಳು, ಶ್ರೀ ಆದರ್ಶ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಇನ್ನರ್ ವೀಲ್ ಕ್ಲಬ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 2ರಂದು ವಿಶ್ವ ಸ್ತನಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್. ಚಂದ್ರಶೇಖರ್ ಅವರು ಮಗುವಿಗೆ ತಾಯಿಯ ಎದೆಹಾಲು ಅಮೃತಸಮಾನವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆದರ್ಶ ಆಸ್ಪತ್ರೆಯ ಹಿರಿಯ ಸ್ತ್ರೀ ಹಾಗೂ ಪ್ರಸೂತಿ ತಜ್ಞರಾದ ಡಾ. ದಮಯಂತಿ ಕೆ., ಪ್ರಸೂತಿ ತಜ್ಞರಾದ ಡಾ. ರಂಜಿತಾ ಎಸ್. ನಾಯಕ್, ಮಕ್ಕಳ ತಜ್ಞರಾದ ಡಾ. ಗುರುಪ್ರಸಾದ್ ಶೆಟ್ಟಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಶ್ರೀಮತಿ ವಿಮಲಾ ಚಂದ್ರಶೇಖರ್ ಹಾಗೂ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಶಾಲಿನಿ ಉಪಸ್ಥಿತರಿದ್ದರು.

ಡಾ. ರಂಜಿತಾ ಎಸ್. ನಾಯಕ್ ಅವರು ಸ್ತನಪಾನದ ಮಹತ್ವ ಕುರಿತು ಮಾಹಿತಿ ನೀಡಿದರು. ಡಾ. ಗುರುಪ್ರಸಾದ್ ಶೆಟ್ಟಿ ಅವರು ಸ್ತನಪಾನದಿಂದ ಮಕ್ಕಳಲ್ಲಿ ಉಂಟಾಗುವ ಶಾರೀರಿಕ ಹಾಗೂ ಮಾನಸಿಕ ಅಭಿವೃದ್ಧಿಯ ಬಗ್ಗೆ ವಿವರಿಸಿದರು.

ಕಾರ್ಯಕ್ರಮವನ್ನು ಶ್ರೀಮತಿ ಅಮಿತಾ ಸ್ವಾಗತಿಸಿದರು, ಸಿಸ್ಟರ್ ನಾಗರತ್ನ ವಂದಿಸಿದರು ಹಾಗೂ ಅನುಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು