Header Ads Widget

ರಾಜ್ಯ ಶಿಕ್ಷಣ ನೀತಿ ೨೦೨೪ರ ಕುರಿತು ಕಾರ್ಯಗಾರ

ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿ ಮಂಗಳೂರು ಸಮಾಜಶಾಸ್ತ್ರ ಸಂಘ, ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣ ಮಟ್ಟ ಕೋಶ ಇದರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಶಿಕ್ಷಣ ನೀತಿ ೨೦೨೪ರ ಮೂರು ಮತ್ತು ನಾಲ್ಕನೇ ಸೆಮಿಸ್ಟರ್‌ನ ಪಠ್ಯಕ್ರಮದ ಕುರಿತು ಒಂದು ದಿನದ ಕಾರ್ಯಗಾರವನ್ನು ಕಾಲೇಜಿನ ಯು.ಜಿ ಎ.ವಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಸಮಾಜ ಶೋಧನಾ ಪತ್ರಿಕೆಯ ಮುಖ್ಯ ಸಂಪಾದಕ ಡಾ. ರಾಬರ್ಟ್ ಪಾಯಸ್ ಕಾರ್ಯಗಾರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಸೋಜನ್ ಕೆ.ಜಿ ಅಧ್ಯಕ್ಷತೆಯನ್ನು ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಗೋವಿಂದರಾಜು ಬಿ.ಎಮ್, ಪ್ರಾಧ್ಯಾಪಕರಾದ ಪ್ರೊ. ವಿನಯ್ ರಾಜು, ಬಿ ಮಂಗಳೂರು ಸಮಾಜಶಾಸ್ತ್ರ ಸಂಘದ ಅಧ್ಯಕ್ಷರಾದ ಡಾ. ಗಿರಿಧರ ರಾವ್ ಎಮ್.ಎಸ್ ಮತ್ತು ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರಾಜೇಂದ್ರ ಕೆ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು