ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎಗೆ ಸಂಬಂಧಿಸಿದಂತೆ, ಮಲ್ಪೆಯಿಂದ ಕರಾವಳಿ ಜಂಕ್ಷನ್‌ವರೆಗೆ ಕಾಮಗಾರಿಯು ನಡೆಯುತ್ತಿದ್ದು, ಮಳೆಗಾಲದಲ್ಲಿ ಸುರಿದ ತೀವ್ರ ಮಳೆಯಿಂದಾಗಿ ರಸ್ತೆಯಲ್ಲಿ ಅಲ್ಲಲ್ಲಿ ಹೊಂಡ ಗುಂಡಿಗಳು ಕಾಣಿಸಿಕೊಂಡಿದ್ದು, ಸಾರ್ವಜನಿಕರಿಗೆ ರಸ್ತೆ ಸಂಚಾರ ಸುಗಮಗೊಳಿಸಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
ಮುಖ್ಯವಾಗಿ ಕರಾವಳಿ ಜಂಕ್ಷನ್‌ನಿಂದ ಪ್ರಾರಂಭವಾಗಿ ಪಂದುಬೆಟ್ಟು ಮತ್ತು ಕಲ್ಮಾಡಿವರೆಗಿನ ರಸ್ತೆಯು ಮಳೆಗಾಲದಲ್ಲಿ ಸುರಿದ ತೀವ್ರ ಮಳೆಯಿಂದಾಗಿ ರಸ್ತೆಯು ಹದಗೆಟ್ಟಿದ್ದು, ಹದಗೆಟ್ಟ ರಸ್ತೆಯನ್ನು ಸರಿಪಡಿಸಲಾಯಿತು. ಅಲ್ಲದೇ, ಭೂಸ್ವಾಧೀನಗೊಂಡ ಸರಿಸುಮಾರು 60 ಜನ ಭೂ ಮಾಲೀಕರಿಗೆ ಸುಮಾರು 10 ಕೋಟಿಯ 96 ಲಕ್ಷ ರೂ.ಗಳನ್ನು ಅವರವರ ಖಾತೆಗೆ ಜಮೆ ಮಾಡಲಾಯಿತು ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
ಈ ಎಲ್ಲಾ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ಕರೆದು ದಿನಾಂಕ:16.08.2025ರಂದು ನಡೆಸಲು ತೀರ್ಮಾನಿಸಲಾಯಿತು. ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ಹೊಂಡಗುಂಡಿಗಳನ್ನು ಮುಚ್ಚಿಸುವ ಸಂದರ್ಭದಲ್ಲಿ ನಗರಸಭೆಯ ಸದಸ್ಯರಾದ ಸುಂದರ ಕಲ್ಮಾಡಿ ಮತ್ತು ಕಾರ್ಯಪಾಲಕ ಅಭಿಯಂತರರಾದ ಚಂದ್ರಶೇಖರ್ ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು