ಉಡುಪಿ ನಗರಸಭೆಯ ಆಶ್ರಯದಲ್ಲಿ ಹಾಗೂ ಈಶ್ವರ ನಗರ ರೆಸಿಡೆನ್ಸ್ ವೆಲ್ಫೇರ್ ಅಸೋಸಿಯೇಷನ್ ಮತ್ತು ವಾರ್ಡ್ ಸಮಿತಿ ಈಶ್ವರ ನಗರ ಇದರ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಸೇವಾ ಪಾಕ್ಷಿಕ ಇದರ ಅಂಗವಾಗಿ ಮತ್ತು ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಜನ್ಮ ದಿನಾಚರಣೆಯ ಪೂರ್ವಭಾವಿಯಾಗಿ ಈಶ್ವರ ನಗರ ವಾರ್ಡ್ನಾದ್ಯಂತ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಯಿತು. ಈಶ್ವರ ನಗರ ಮುಖ್ಯ ವೃತ್ತದ ಬಳಿ ಉಡುಪಿ ನಗರಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಪೂಜಾರಿಯವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಮತ್ತು ಪೌರಾಯುಕ್ತರಾದ ಮಹಾಂತೇಶ್ ಹಂದರಗಿ, ಅಸೋಸಿಯೇಷನ್ ಅಧ್ಯಕ್ಷರಾದ ಹರೀಶ್ ಜಿ ಕಲ್ಮಾಡಿ, ಪ್ರಧಾನ ಕಾರ್ಯದರ್ಶಿ ಡಾ.ಬಾಲಚಂದ್ರ, ವಾರ್ಡ್ ಸಮಿತಿ ಅಧ್ಯಕ್ಷ ಸುರೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಕೃಷ್ಣ ನಾಯ್ಕ, ನಗರಸಭೆಯ ಆರೋಗ್ಯ ನಿರೀಕ್ಷಕರಾದ ಪ್ರಕಾಶ್ ಪ್ರಭು ಮತ್ತು ಹರೀಶ್ ಬಿಲ್ಲವ,ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಪೌರಕಾರ್ಮಿಕರು ಉಪಸ್ಥಿತರಿದ್ದರು. ನಗರಸಭಾ ಸದಸ್ಯ ಮಂಜುನಾಥ ಮಣಿಪಾಲ ಅಭಿಯಾನವನ್ನು ಸಂಯೋಜಿಸಿದರು.
0 ಕಾಮೆಂಟ್‌ಗಳು