Header Ads Widget

ಮಹೇಶ್‌ ಶೆಟ್ಟಿ ತಿಮರೋಡಿಗೆ ಒಂದು ವರ್ಷ ಗಡಿಪಾರು!

ಮಹತ್ವದ ಬೆಳವಣಿಗೆಯೊಂದರಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸರು ಪುತ್ತೂರು ಎಸಿ ಕೊನೆಗೂ ಗಡಿಪಾರು ಮಾಡಿ ಆದೇಶ ಮಾಡಿದ್ದಾರೆ.

ಮಹೇಶ್‌ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಮಾಡಲಾಗಿದೆ.

ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ನಂತರ ಗಡಿಪಾರು ಮಾಡುವ ಕಾನೂನು ಕ್ರಮ ನಡೆಯಲಿದೆ.

ಸೌಜನ್ಯ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಮಹೇಶ್‌ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ಇದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ತಿಮರೋಡಿಯನ್ನು ಗಡಿಪಾರು ಮಾಡಿ ಪುತ್ತೂರು ಎಸಿ ಸ್ಟೆಲ್ಲಾ ವರ್ಗಿಸ್‌ ಅವರು ಆದೇಶಿಸಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತರು ಸೆ.20 ರಂದು ಅಧಿಕೃತವಾಗಿ ಗಡಿಪಾರು ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಈ ಕ್ರಮದ ಮೂಲಕ ಜಿಲ್ಲೆಯ ಜನರಲ್ಲಿ ಭಯ ಹಾಗೂ ಅಶಾಂತಿ ಕಡಿಮೆ ಮಾಡಿ, ಶಾಂತಿ ಸುವ್ಯವಸ್ಥೆ ಕಾಪಾಡುವುದು ಮುಖ್ಯ ಉದ್ದೇಶ ಎಂದು ವರದಿಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು