ಉಡುಪಿ: ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ಹಾಗೂ ಗ್ರಂಥಾಲಯ ವಿಭಾಗದ ವತಿಯಿಂದ ಅಗಲಿದ ಸಾಹಿತಿ ಎಸ್.ಎಲ್.ಭೈರಪ್ಪನವರಿಗೆ ನುಡಿನಮನ ಸಲ್ಲಿಸಲಾಯಿತು. ಕನ್ನಡ ವಿಭಾಗ ಮುಖ್ಯಸ್ಥ ಡಾ.ಪುತ್ತಿ ವಸಂತ ಕುಮಾರ್ ಭೈರಪ್ಪನವರ ಬದುಕು-ಬರಹದ ಸಂಸ್ಮರಣಾ ಭಾಷಣ ಮಾಡಿದರು.
ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಪದವಿಪೂರ್ವ ವಿಭಾಗ ಪ್ರಾಂಶುಪಾಲೆ ಪ್ರೊ.ಮಾಲತಿ ದೇವಿ ಎ.,ಪ್ರಾಧ್ಯಾಪಕರಾದ ಜಯಂತಿ ಪ್ರಭು, ಅಶ್ವಿನಿ ಐಗಳ್ ಉಪಸ್ಥಿತರಿದ್ದರು. ಗ್ರಂಥಪಾಲಕ ಕಿಶೋರ್ ಹೆಚ್.ವಿ. ಸ್ವಾಗತಿಸಿ, ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ವಿನಿತ್ ರಾವ್ ವಂದಿಸಿದರು. ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಸುಚಿತ್ ಕೋಟ್ಯಾನ್ ನಿರೂಪಿಸಿದರು.
0 ಕಾಮೆಂಟ್‌ಗಳು