ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ನಿಮಿತ್ತ ಹಮ್ಮಿಕೊಂಡಿರುವ ಜ್ಞಾನ ಮಂಡಲೋತ್ಸವ ಹಿನ್ನೆಲೆಯಲ್ಲಿ ದಿನಾಂಕ ಸೆಪ್ಟೆಂಬರ್ 12 ರಂದು ನಡೆಯಲಿರುವ ಭಾರತೀಯ ಜ್ಞಾನ ಪರಂಪರಾ ಎಂಬ ಶೀರ್ಷಿಕೆಯಲ್ಲಿ ಆಯೋಜಿಸಿರುವ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಸುಪ್ರಸಿದ್ಧ ವಿಶ್ವವಿದ್ಯಾಲಯವಾದ ನಿಟ್ಟೆ ವಿಶ್ವವಿದ್ಯಾಲಯದ ಮಾನ್ಯ ಸಂಸ್ಥಾಪಕ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ವಿನಯ್ ಹೆಗ್ಡೆ ಅವರನ್ನು ಸಮ್ಮೇಳದ ಮುಖ್ಯ ಸಂಯೋಜಕರಾದ ವಿದ್ವಾನ್ ಎಂ ಪ್ರಸನ್ನಾಚಾರ್ಯಆಹ್ವಾನಿಸಿದರು.
ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಿಟ್ಟೆ ವಿಶ್ವವಿದ್ಯಾಲಯ ನಿಟ್ಟೆ ಮತ್ತು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರು ಹಾಗೂ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಭಾರತೀಯ ಜ್ಞಾನ ವ್ಯವಸ್ಥೆ (IKS) ಇದರ ನಿರ್ದೇಶಕರಾದ ಡಾ. ಸುಧೀರ್ ರಾಜ್ ಕೆ ಮತ್ತು ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ಉಡುಪಿ ಇದರ ನಿರ್ದೇಶಕರಾದ ಡಾ ಬಿ ಗೋಪಾಲಾಚಾರ್ ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು