Header Ads Widget

ಪೆರ್ಡೂರು : ಶಾಲಾ ಬಸ್-ಬೈಕ್ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು, ಇನ್ನೋರ್ವ ಗಂಭೀರ!

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ. ದೊಂಡರಂಗಡಿ ಕಡೆಯಿಂದ ಪೆರ್ಡೂರು ಕಡೆಗೆ ಬರುತ್ತಿದ್ದ ಅಮೃತ ಭಾರತಿ ಶಾಲೆಯ ಬಸ್, ಎದುರಿನಿಂದ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರ ಪರಿಣಾಮ ಬೈಕ್ ಸವಾರ ಗಣೇಶ್ ಹಾಗೂ ಸಹಸವಾರ ಸುದರ್ಶನ್ ಬೈಕ್ ಸಮೇತ ರಸ್ತೆ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ.

ಗಾಯಗೊಂಡ ಸುದರ್ಶನ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು