ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ ಹಾಗು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೆಶನ್ (ರಿ) ದ ಉಡುಪಿ ವಲಯದ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ಕಲರ್ಸ್ ಆಫ್ ಶ್ರೀ ಕೃಷ್ಣ ಲೀಲೋತ್ಸವ -2025 ಆಯೋಜಿಸಲಾಗಿದೆ.
ಪ್ರಥಮ :7,777.00, ದ್ವಿತೀಯ 5,555.00, ತ್ರಿತೀಯ 3,333.00 ಹಾಗು 5 ಸಮಾಧಾನಕರ ಬಹುಮಾನಗಳು ಇವೆ.
ಸ್ಪರ್ಧೆಯ ನಿಯಮಗಳು:
ಪ್ರತಿ ಸ್ಪರ್ಧಿಯು ಗರಿಷ್ಠ ನಾಲ್ಕು ಛಾಯಾಚಿತ್ರಗಳನ್ನು ಕಳುಹಿಸಬಹುದು.
ಒಂದು ಛಾಯಾಚಿತ್ರದ ಗಾತ್ರ ಗರಿಷ್ಠ 4MBಗಿಂತ ಹೆಚ್ಚು ಮೀರಬಾರದು.
ಮೊಬೈಲ್‌ನಲ್ಲಿ ತೆಗೆದ ಛಾಯಾಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
ಪೋಟೋಶಾಪ್‌ನಲ್ಲಿ ತಿರುಚಲಾದ ಮತ್ತು ವಾಟರ್ ಮಾರ್ಕ್ ಇದ್ದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
ಒಂದು ಬಾರಿ ನೋಂದಣಿಯಾದ ಛಾಯಾಚಿತ್ರಗಳನ್ನು ಬದಲಾಯಿಸಲು ಅವಕಾಶವಿರುವುದಿಲ್ಲ.
ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶ.
ಛಾಯಾಚಿತ್ರವನ್ನು ಇಮೇಲ್ ಮೂಲಕ ಕಳುಹಿಸುವಾಗ ತಮ್ಮ ಭಾವಚಿತ್ರ, ಹೆಸರು, ವಿಳಾಸ, ದೂರವಾಣಿ ಹಾಗೂ ನೋಂದಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.
ತೀರ್ಪುಗಾರರ ತೀರ್ಮಾನವೇ ಅಂತಿಮ.
ಉಡುಪಿಯ ರಥಬೀದಿಯಲ್ಲಿ ನಡೆಯುವ ವಿಟ್ಲಪಿಂಡಿಯ ದಿನದಂದು( 15-09-2025 ) ಸೆರೆಹಿಡಿದ ಛಾಯಾಚಿತ್ರಗಳು ಮಾತ್ರ.
ಛಾಯಾಚಿತ್ರವನ್ನು ಕಳುಹಿಸಲು ಕೊನೆಯ ದಿನಾಂಕ 25-09-2025
ಫಲಿತಾಂಶವನ್ನು ದಿನಾಂಕ 10-10-2025 ರಂದು ಪ್ರಕಟಿಸಲಾಗುವುದು.
ಛಾಯಾಚಿತ್ರಗಳನ್ನು ಕಳುಹಿಸಬೇಕಾದ ವಿಳಾಸ : rameshyelluru@gmail.com.
ನೋಂದಾಯಿಸಲು ಕೊನೆಯ ದಿನಾಂಕ 12-09-2025 ನೋಂದಾಯಿಸಿದ ಎಲ್ಲಾ ಛಾಯಾಗ್ರಾಹಕರಿಗೆ ಒಂದು ಟಿ-ಶರ್ಟ್ ಉಚಿತ.
ಟಿ-ಶರ್ಟ್ ಧರಿಸಿ ಛಾಯಾಗ್ರಹಣವನ್ನು ಮಾಡತಕ್ಕದ್ದು.
ಛಾಯಾಚಿತ್ರವನ್ನು ಯಾವುದೇ ಪೂರ್ವಾನುಮತಿ ಇಲ್ಲದೆ ಬಳಸುವ ಹಕ್ಕನ್ನು ಪಡೆದಿರುತ್ತೇವೆ.
ಎಂದು ಎಸ್ ಕೆಪಿ ಎ ಉಡುಪಿ ವಲಯದ ನಿಯೋಜಿತ ಅಧ್ಯಕ್ಷ ದಿವಾಕರ್ ಹಿರಿಯಡ್ಕ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
0 ಕಾಮೆಂಟ್‌ಗಳು