Header Ads Widget

ಶ್ರೀಕೃಷ್ಣ ಮಠ- ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಶ್ರೀಕೃಷ್ಣ ಮಠದಲ್ಲಿ ಉಚಿತ ಕನ್ನಡಕ ವಿತರಣೆ ಪರ್ಯಾಯ ಶ್ರೀ ಪುತ್ತಿಗೆ ಮಠ-ಶ್ರೀ ಕೃಷ್ಣಮಠದ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ- ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ವತಿಯಿ೦ದ ನಡೆದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವು ಗೀತಾಮ೦ದಿರದಲ್ಲಿ ನಡೆಯಿತು. 

ಪರ್ಯಾಯ ಪುತಿಗೆ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇ೦ದ್ರ ತೀರ್ಥ ಶ್ರೀಪಾದರು ಫಲಾನುಭವಿಗಳಿಗೆ ಕನ್ನಡಕ ವಿತರಿಸಿ ಆಶೀರ್ವಚನವಿತ್ತರು.

ಪ್ರಸಾದ್ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು ಅಧ್ಯಕ್ಷತೆ ವಹಿಸಿದರು. ಉಡುಪಿಯ ಖ್ಯಾತ ನ್ಯಾಯವಾದಿ ಶ್ರೀ ಉಮೇಶ್ ಶೆಟ್ಟಿ ಕಳತ್ತೂರು ಅತಿಧಿಗಳಾಗಿ ಭಾಗವಹಿಸಿದ್ದರು. ಪ್ರಸಾದ್ ನೇತ್ರಾಲಯದ ಮುಖ್ಯ ಆಡಳಿತಾಧಿಕಾರಿ ಶ್ರೀ ಮಧ್ವವಲ್ಲಭ ಆಚಾರ್ಯರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಮಠದ ಸಾ೦ಸ್ಕತಿಕ ಕಾರ್ಯದರ್ಶಿ ಶ್ರೀ ರಮೇಶ್ ಭಟ್ ಉಪಸ್ಥಿತರಿದ್ದರು. ಆಸ್ಪತ್ರೆಯ ಸಿಬ೦ದಿಗಳಾದ ಶ್ರೀ ಗಣೇಶ್, ಶ್ರೀ ಧನರಾಜ್ ಸಹಕರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು