Header Ads Widget

ಅಂಬಲಪಾಡಿ : ಟ್ರಕ್-ಬೈಕ್ ನಡುವೆ ಭೀಕರ ಅಪಘಾತದಲ್ಲಿ; ಯುವಕ ಸ್ಥಳದಲ್ಲೇ ಸಾವು!

ಉಡುಪಿ: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರನೋರ್ವ ಟ್ರಕ್ ನ ಚಕ್ರದಡಿಗೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.

ಮೃತ ದುರ್ದೈವಿಯನ್ನು ದೆಂದೂರುಕಟ್ಟೆಯ ನಿವಾಸಿ ಪ್ರದೀಪ (38) ಎಂದು ಗುರುತಿಸಲಾಗಿದೆ.

ಟ್ರಕ್ ಬೈಕ್ ಸವಾರನನ್ನು ಅಪಘಾತ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಎಳೆದುಕೊಂಡು ಹೋಗಿದೆ. ಅಪಘಾತದ ರಭಸಕ್ಕೆ ಮೃತ ಸವಾರನ ತಲೆ ಭಾಗವು ಛಿದ್ರಗೊಂಡಿದೆ.

ಪ್ರದೀಪ್ ಅಂಬಲಪಾಡಿ ಸುರಭಿ ಅಟೋಮೊಬೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ‌ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಉಡುಪಿ ಸಂಚಾರಿ ಪೋಲಿಸರು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಇಲಾಖೆಗೆ‌ ನೆರವಾದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು