ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನಾಚರಣೆ
ಉಡುಪಿ: ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸಾವಿನ ಬಾಗಿಲಿಗೆ ಕೊಂಡೊಯ್ಯುವ ಏಕೈಕ ರೋಗ ಹೃದ್ರೋಗ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಆದರ್ಶ ಅಸ್ಪತ್ರೆಯಲ್ಲಿ ನಡೆದ ವಿಶ್ವ ಹೃದಯ ದಿನಾಚರಣೆ ಮತ್ತು ಉಚಿತ ಹೃದ್ರೋಗ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಸಣ್ಣ ಮಕ್ಕಳೂ ಕ್ಯಾನ್ಸರ್ ಪೀಡಿತರಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಆರೋಗ್ಯ ವ್ಯವಸ್ಥೆಯೇ ಅಪಾಯಕ್ಕೆ ಸಿಲುಕುವ ಸಂಭವವಿದೆ. ಹೀಗಾಗಿ ದೇಶದ ಒಟ್ಟು ವ್ಯವಸ್ಥೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.
ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್ ಮಾತನಾಡಿದರು. ಡಿಎಚ್ಒ ಡಾ. ಬಸವರಾಜ್ ಹುಬ್ಬಳ್ಳಿ, ಆಸ್ಪತ್ರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾ ಚಂದ್ರಶೇಖರ್, ತಜ್ಞ ವೈದ್ಯರಾದ ಡಾ. ಶ್ರೀಕಾಂತ್, ಡಾ. ಸುಹಾಸ್ ಜಿ.ಸಿ., ಬಿಜೆಪಿ ಮುಖಂಡ ಉದಯ್ ಕುಮಾರ್ ಶೆಟ್ಟಿ, ಡಾಜಸ್ಪ್ರೀತ್ ಸಿಂಗ್, ಡಾ. ಮೋಹನ ದಾಸ್ ಶೆಟ್ಟಿ ಉಪಸ್ಥಿತರಿದ್ದರು. ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್ ಸ್ವಾಗತಿಸಿದರು. ಡಯಟೀಶಿಯನ್ ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ವ್ಯವಸ್ಥಾಪಕ ಪ್ರಕಾಶ್ ಡಿ.ಕೆ. ವಂದಿಸಿದರು.
0 ಕಾಮೆಂಟ್‌ಗಳು