Header Ads Widget

ಮಧ್ವ ಜಯಂತಿ ಪ್ರಯುಕ್ತ ರಾಜಾಂಗಣದಲ್ಲಿ ವಿಚಾರಗೋಷ್ಠಿ, ಉಪನ್ಯಾಸ

                                                                  


                                         ರಾಜಾಂಗಣದಲ್ಲಿ ವಿಚಾರಗೋಷ್ಠಿ, ಉಪನ್ಯಾಸ

ದೈತ ಸಿದ್ಧಾಂತದ ಪ್ರತಿಪಾದಕರಾದ ಶ್ರೀಮಧ್ವಾಚಾರ್ಯರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಸಿದ್ಧತೆ ನಡೆಸಿದೆ. ಅ.2ರಂದು ಸಂಜೆ 4 ಗಂಟೆಗೆ ವಿಜಯದಶಮಿಯ ಶುಭದಿನದಂದು ರಾಜಾಂಗಣದಲ್ಲಿ ಧಾರ್ಮಿಕ ಸಭೆ ಆಯೋಜಿಸಲಾಗಿದೆ.


ಪುತ್ತಿಗೆ ಪರ್ಯಾಯ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪಟ್ಟದ ಕಿರಿಯ ಶಿಷ್ಯ ಸುಶ್ರೀಂದ್ರ ತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ವಿಚಾರಗೋಷ್ಠಿ ಆಯೋಜಿಸಲಾಗಿದೆ. ಆಧುನಿಕ ಜೀವನದಲ್ಲಿ ಮಧ್ವ ಸಿದ್ಧಾಂತದ ಪ್ರಸ್ತುತತೆ ಕುರಿತು ಉಪನ್ಯಾಸ ನಡೆಯಲಿದೆ. ನಿತ್ಯ ಜೀವನ, ಆಧುನಿಕ ವಿಜ್ಞಾನ ಹಾಗೂ ಆನಂದದಲ್ಲಿ ಮಧ್ವ ಸಿದ್ಧಾಂತದ ಕುರಿತು ವಿದ್ವಾನ್ ಕೃಷ್ಣರಾಜ ಕುತ್ಪಾಡಿ, ಡಾ. ಪ್ರತೋಷ ಎ.ಪಿ., ಡಾ. ಸುದರ್ಶನ ವಿವರಿಸಲಿದ್ದಾರೆ.


ಸಭಾ ಕಾರ್ಯಕ್ರಮದ ಬಳಿಕ ಸಂಜೆ 6:30ರಿಂದ ಡಾ. ವಿದ್ಯಾಭೂಷಣ ಅವರಿಂದ ಗಾನ ಲಹರಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಮಧ್ವ ಜಯಂತಿಯ ಆಯೋಜಕ ಮುರಳಿ ತಂತ್ರಿ, ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಪ್ರಕ ಟಣೆಯಲ್ಲಿ ತಿಳಿಸಿದ್ದಾರೆ.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು