Header Ads Widget

ಉಡುಪಿ –ಉಚ್ಚಿಲ ದಸರಾ 2025:ಉದ್ಘಾಟನೆ

 


ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ದಸರಾ ಕಾರ್ಯಕ್ರಮ ಉದ್ಘಾಟನೆ 


ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಮತ್ತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಉದ್ಘಾಟಿಸಿದರು.

ಈ ಸಂದರ್ಭ ರೋಹಿಣಿ ಸಿಂಧೂರಿ ಮಾತನಾಡಿ, ಉಡುಪಿ – ಉಚ್ಚಿಲ ದಸರಾ ಆಚರಣೆಯು ಮೈಸೂರು ದಸರಾಕ್ಕಿಂತ ವಿಭಿನ್ನವಾಗಿದೆ. ಮಹಾಲಕ್ಷ್ಮಿ ದೇವಳಕ್ಕೆ ಬಂದ ಅನುಭವ ಸಂತಸ ತಂದಿದೆ ಎಂದು 11 ದಿನಗಳ ಕಾಲ ನಡೆಯುವ ದಸರಾಗೆ ಶುಭ ಹಾರೈಸಿದರು.

 ಉಡುಪಿ ಪೋಲಿಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಪೂರ್ಣಿಮ, ಉದ್ಯಮಿಗಳಾದ ಕೃಷ್ಣಮೂರ್ತಿ, ಅಂಜಲಿ ವಿಜಯ್ ರವರು ಮಾತನಾಡಿದರು.

 ಈ ಸಂದರ್ಭ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ,  ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೊಟ್ಯಾನ್ ಬೆಳ್ಳಂಪಳ್ಳಿ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್‌ ಎರ್ಮಾಳು, ಕಾರ್ಯದರ್ಶಿ ಶರಣ್‌ಕುಮಾರ್‌ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ  ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್‌, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉದ್ಯಮಿ ಸಾಧು ಸಾಲ್ಯಾನ್, ಶ್ರೀಪತಿ ಭಟ್, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಷ್‌ ಅಮೀನ್‌ ಪಡುಕರೆ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೊಟ್ಯಾನ್ ಬೆಳ್ಳಂಪಳ್ಳಿ ಸ್ವಾಗತಿಸಿದರು. ದೇವಳದ ಪ್ರಧಾನ ವ್ಯವಸ್ಥಾಪಕ ಸತೀಷ್‌ ಅಮೀನ್‌ ಪಡುಕರೆ ನಿರೂಪಿಸಿ ದರು. ಪ್ರಧಾನ ಕಾರ್ಯದರ್ಶಿ ಶರಣ್‌ ಕುಮಾರ್‌ ಮಟ್ಟು ವಂದಿಸಿದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು