Header Ads Widget

ಪಿಪಿ ಸಂಧ್ಯಾ ಕಾಲೇಜು: ಜ್ಞಾನಂ -2025ಸ್ಪರ್ಧೆ


ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು, ಉಡುಪಿ ಇದರ ವತಿಯಿಂದ ದಿನಾಂಕ 28- 10 -2025 ನೇ ಮಂಗಳವಾರದಂದು ಉಡುಪಿ, ಮಂಗಳೂರು, ಕಾರ್ಕಳ ಹಾಗೂ ಕುಂದಾಪುರದ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಜ್ಞಾನಂ - 2025 ಎಂಬ ವಿಭಿನ್ನ ಸ್ಪರ್ಧಾ ಕಾರ್ಯಕ್ರಮ ಒಂದನ್ನು ಆಯೋಜಿಸ ಲಾಗಿದೆ.

ಈ ಕಾರ್ಯಕ್ರಮದ ಪ್ರಯುಕ್ತ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ, ವಾಣಿಜ್ಯ ವಿಭಾಗ, ಮಾಹಿತಿ ತಂತ್ರಜ್ಞಾನ ಹಾಗೂ ಕಲಾ ವಿಭಾಗಗಳಿಗೆ ಸಂಬಂಧಿಸಿದಂತೆ ವಿಶಿಷ್ಟವಾದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳ ತಂಡವು ಈಗಾಗಲೇ ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳನ್ನು ಸಂಪರ್ಕಿಸಿದ್ದು ಮಾಹಿತಿಯನ್ನು ನೀಡಿರುತ್ತಾರೆ. ಸ್ಥಳದಲ್ಲಿಯೇ ಹೆಸರು ನೋಂದಾವಣೆಗೆ ಅವಕಾಶವಿರುವುದರಿಂದ ಪದವಿಪೂರ್ವ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಭಾಗವಹಿಸಿ ಈ ಕಾರ್ಯಕ್ರಮದ ಸದುಪ ಯೋಗವನ್ನು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಕಾಂತ್ ಭಟ್ ಅವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು