ರಾಜ್ಯದ ಸರಕಾರಿ ಕಾಲೇಜುಗಳಲ್ಲಿ ಕಟ್ಟಡ ನಿರ್ಮಾಣದ ಬಗ್ಗೆ ವಿನ್ಯಾಸವನ್ನು ಭವಿಷ್ಯದ ದೂರದೃಷ್ಠಿತ್ವ ಇಟ್ಟುಕೊಂಡು ರಚಿಸಬೇಕು ಮತ್ತು ವೈಜ್ಞಾನಿಕವಾಗಿ ಅನುದಾನ ಹಂಚಿಕೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಹೇಳಿದರು.
ಅವರು ಶನಿವಾರ ಬ್ರಹ್ಮಾವರ ತಾಲ್ಲೂಕಿನ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಒಂದು ಕೋಟಿಗೂ ಮಿಕ್ಕಿ ವೆಚ್ಚದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಈಗಾಗಲೇ ೨ಸಾವಿರ ಉಪನ್ಯಾಸಕರ ನೇಮಕಾತಿ ಆಗಿದ್ದು, ಉಪನ್ಯಾಸಕರ ನೇಮಕಾತಿಯನ್ನು ಹೆಚ್ಚು ಬೇಡಿಕೆ ಇರುವ ಕೋರ್ಸಗಳಿಗೆ ಆದ್ಯತೆ ನೀಡಲಾಗುವುದು ಮತ್ತು ಅನುದಾನ ಹಂಚಿಕೆಯನ್ನು ಮೂಲಭೂತ ಸೌಕರ್ಯಗಳೊಂದಿಗೆ ನೀಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದರು. ಉದ್ಯೋಗ ಲಭ್ಯತೆ ಆಧಾರದಲ್ಲಿ ಹೊಸ ಹೊಸ ಕೋರ್ಸಗಳನ್ನು ನೀಡಲಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ
ಸರಕಾರಿ ಕಾಲೇಜುಗಳಿಗೆ ಅಗತ್ಯತೆಯ ಮೂಲಭೂತ ಸೌಕರ್ಯ, ಉಪನ್ಯಾಸಕರನ್ನು ಮತ್ತು ಹಿಂದುಳಿದ ಬರ್ಗಗಳ ವಸತಿ ನಿಲಯ ನೀಡಿದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ ಎಂದು ಹೇಳಿದರು. ಸರಕಾರಿ ಶಾಲೆಗಳಿಗೆ ಬರುವ ಹೆಚ್ಚಿನ ವಿದ್ಯಾರ್ಥಿಗಳು ಆರ್ಥಿಕವಾಗಿ ದುರ್ಬಲರು. ಕುಂದಾಪುರ ತಾಲೂಕಿನಲ್ಲಿ ೩ಮೇಲ್ದರ್ಜೆಯ ಕಾಲೇಜು ಇರುವುದರಿಂದ ಕುಂದಾಪುರದಲ್ಲಿ ಸುಸಜ್ಜಿತ ವಸತಿ ನಿಲಯದ ಅಗತ್ಯತೆ ಇದೆ ಎಂದು ಸಚಿವರಲ್ಲಿ ಮನವಿ ಮಾಡಿದರು. ಸರಕಾರದ ಅನುದಾನದ ಹಂಚಿಕೆಯ ವಿಷಯದಲ್ಲಿ ಆಯಾ ಕ್ಷೇತ್ರದ ಶಾಸಕರ ಗಮನಕ್ಕೆ ತಂದಲ್ಲಿ ಅನುದಾನ ಸದ್ಭಳಕೆ ಆಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಬಾರ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಶಾಂತಾರಾಮ ಶೆಟ್ಟಿ, ಹನೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಕಾ ಪೂಜಾರಿ, ಮಂಗಳೂರು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಪ್ರೊ. ಕೆ.ಆರ್ ಕವಿತಾ ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಸತೀಶ್ ಕುಮಾರ್ ಪಾವೂರು, ರಘುರಾಜ್ ಕದ್ರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ಭಾಸ್ಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ರೋಶನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

0 ಕಾಮೆಂಟ್‌ಗಳು