Header Ads Widget

ಉಡುಪಿ ಜಿಲ್ಲೆ ಸಂಪ್ರದಾಯಬದ್ಧ ಕಂಬಳ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಇಂದು ಸಂಪ್ರದಾಯಬದ್ಧ ಕಂಬಳ ಸಮಿತಿ ಉಡುಪಿ ಜಿಲ್ಲೆಯ ಪರವಾಗಿ ಮಾನ್ಯ ಉಡುಪಿ ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರ್ಕಾರದಿಂದ ಅನುದಾನ ಒದಗಿಸುವ ಬಗ್ಗೆ ಮನವಿ ಸಲ್ಲಿಸಲಾಯಿತು. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮುಂದಿನ ದಿನಗಳಲ್ಲಿ ಅನುದಾನದ ಬಗ್ಗೆ ಸರ್ಕಾರದೊಂದಿಗೆ ಸಮಾಲೋಚಿಸಿ ವ್ಯವಸ್ಥೆಗೊಳಿಸುವ ಬಗ್ಗೆ ಹಾಗೂ ಈ ಬಾರಿಯ ಸಂಪ್ರದಾಯಬದ್ಧ ಕಂಬಳ ವೀಕ್ಷಣೆಗೂ ಬರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಸುಧಾಕರ್ ಹೆಗ್ಡೆ ಹೆರಂಜೆ ದೊಡ್ಡಮನೆ ಹಾಗೂ ಸಮಿತಿಯ ಕಾನೂನು ಸಲಹೆಗಾರರಾದ ಚೇರ್ಕಾಡಿ ದೊಡ್ಡಮನೆ ಪ್ರೇಮ್ ಪ್ರಸಾದ್ ಶೆಟ್ಟಿಯವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು