ಕನ್ನಡ ಕಿರುತೆರೆ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಕಾವ್ಯ ಶಾಸ್ತ್ರಿ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಗೌರವಿಸಲಾಯಿತು.
ದೇವಳದ ನವದುರ್ಗಾ ಲೇಖನ ಮಂಟಪದಲ್ಲಿ ತಂದೆ-ತಾಯಿ ಜೊತೆ ನವದುರ್ಗಾ ಲೇಖನವನ್ನು ಬರೆದು ಶಾಶ್ವತ ಸೇವೆಯನ್ನು ಸಮರ್ಪಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ನವದುರ್ಗಾ ಲೇಖನ ಯಜ್ಞದ ಮಹಿಳಾ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ಬೆಂಗಳೂರು ಸಮಿತಿಯ ಗಿರೀಶ್ ಪೂಜಾರಿ, ರಾಜಣ್ಣ ಬೆಂಗಳೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು
0 ಕಾಮೆಂಟ್‌ಗಳು