Header Ads Widget

ಉಡುಪಿ : ಆರ್ ಟಿ ಓ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ!

ಉಡುಪಿ: ಆರ್ ಟಿ ಓ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯಕ್ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿಯ ಕಿನ್ನಿಮುಲ್ಕಿ ಫ್ಲ್ಯಾಟ್ ನಲ್ಲಿ ಇರುವ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲಕ್ಷ್ಮೀ ನಾರಾಯಣ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದಾರೆ. ಕುಮುಟಾ ಹಾಗೂ ಪಡುಅಲೆವೂರಿನ ಆರ್ಟಿಓ ಅಧಿಕಾರಿಯ ಬ್ರೋಕರ್ ರವಿ ಸೇರಿಗಾರ್‌ನ ಮನೆ ಮತ್ತು ಕಚೇರಿಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು