ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣತಿದಾರರಾಗಿ ನೇಮಕ ಮಾಡಿರುವ ಸ.ಪ್ರೌ. ಶಾಲೆ ಶೆಟ್ಟಿಬೆಟ್ಟು ಬ್ರಹ್ಮಾವರದ ಸಹಶಿಕ್ಷಕ ವೆಂಕಟೇಶ್ ಪಿ ಬಿ, ಆದೇಶ ಸ್ವೀಕರಿಸದೆ ನಿರ್ಲಕ್ಷ್ಯ ವಹಿಸಿದ ಕಾರಣ ಕರ್ತವ್ಯದಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಆದೇಶಿಸಿದ್ದಾರೆ.
ವೆಂಕಟೇಶ್ ಪಿ ಬಿ, ಅವರು ನೇಮಕಾತಿ ಆದೇಶವನ್ನು ಸ್ವೀಕರಿಸಿದೆ, ಹಲವು ಬಾರಿ ದೂರವಾಣಿ ಮೂಲಕ ಸಂಪರ್ಕಿಸಿದರೂ ನೇಮಕಾತಿ ಆದೇಶ ಪ್ರತಿಯನ್ನು ಸ್ವೀಕರಿಸಲು ನಿರಾಕರಿಸಿರುತ್ತಾರೆ.
ಆದ್ದರಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು ಈವರೆಗೂ ನೋಟಿಸ್ ಗೆ ಸಮಜಾಯಿಷಿ ನೀಡಿರುವುದಿಲ್ಲ.
ಈ ಕಾರಣದಿಂದಾಗಿ ಸಮೀಕ್ಷೆದಾರರನ್ನು ಅಮನಾತಿನಲ್ಲಿರಿಸಿ ಆದೇಶಿಸಲಾಗಿದೆ.
ಇದೇ ತರ ಸಮೀಕ್ಷೆ ಕಾರ್ಯದಲ್ಲಿ ಸಮೀಕ್ಷೆದಾರರು ನಿರ್ಲಕ್ಷತನ ತೋರಿದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
0 ಕಾಮೆಂಟ್‌ಗಳು